ಬೆಂಗಳೂರು : ಅಸಲಿ ವಿಷಯ ಅದಲ್ಲ. ಈಗಲ್ಲ, ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 2008ರಲ್ಲಿಯೇ ರಾಜ್ಯದ ಬಿಜೆಪಿ ಸರಕಾರ ರಾಜ್ಯದಲ್ಲಿ ಅಮುಲ್ ಮಾರುಕಟ್ಟೆ ವಿಸ್ತರಣೆಗೆ ಬೆಂಬಲ ನೀಡಿತ್ತು ಎಂದು ಆರೋಪ ಮಾಡಿದ್ದಾರೆ.
2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು. ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು ಎಂದು ಹೇಳಿದ್ದಾರೆ.
ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!! 13/13#ಬಿಜೆಪಿಯ_ವರಸೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023
ಒಂದು ಕಡೆ ಸಫಾರಿ, ಮತ್ತೊಂದೆಡೆ ಸುಪಾರಿ!
ಒಂದು ಕಡೆ ಸಫಾರಿ. ಇನ್ನೊಂದು ಕಡೆ ಸುಪಾರಿ. ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ! ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎನ್ನುವುದು ಸಚಿವ ಅಶ್ವತ್ಥನಾರಾಯಣ ಅವರ ಕುಹಕದ ಮಾತು ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ‘ಮುಲಾಜಿಲ್ಲದೆ CRPF ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ : ‘ಮರು ಪರೀಕ್ಷೆ ನಡೆಸಬೇಕು’ ಎಂದ ಕುಮಾರಸ್ವಾಮಿ
ಸಿ.ಟಿ ರವಿ ಕಾಲೆಳೆದ ಕುಮಾರಸ್ವಾಮಿ
ಇನ್ನೊಬ್ಬರು, ಸಿ.ಟಿ ರವಿ. ಈ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ.ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ. ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತು ನಾವು ಮಾಡುತ್ತಿಲ್ಲ ಎಂದು ಕಾಲೆಳೆದಿದ್ದಾರೆ.
ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ @BJP4India @BJP4Karnataka ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು!! ಇದು ಬಿಜೆಪಿಯ (ಭರ)ವರಸೆ!! 1/13#ಬಿಜೆಪಿಯ_ವರಸೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023
ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ
ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಬಿಜೆಪಿ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ. ಇಂದು ಕರ್ನಾಟಕ, ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ! ಎಂದು ಕುಮಾರಸ್ವಾಮಿ ಹೇಳಿದ್ದಾರೆ.