ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ ವಿವಿಧ ಪಕ್ಷಗಳ 200ಕ್ಕೂ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಹೌದು, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ಮೊದಲ ದಿನ 221 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇಂದು ಸಲ್ಲಿಕೆಯಾಗಿರುವ ನಾಮಪತ್ರಗಳ ಪೈಕಿ 197 ಪುರುಷ ಅಭ್ಯರ್ಥಿಗಳು ಹಾಗೂ 24 ಮಹಿಳಾ ಅಭ್ಯರ್ಥಿಗಳು ಇದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್, ಕಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್, ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾನು ಇಂದು ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ.@BJP4Karnataka
1/3 pic.twitter.com/njC5ZnvjDz
— Dr Sudhakar K (@mla_sudhakar) April 13, 2023
ಇದನ್ನೂ ಓದಿ : ಬಿಜೆಪಿ Next CM : ಬಿ.ವೈ.ವಿಜಯೇಂದ್ರ ಶಾಕಿಂಗ್ ಹೇಳಿಕೆ
ಯಾವ ಪಕ್ಷದಿಂದ ಎಷ್ಟು ನಾಮಪತ್ರ
ಬಿಜೆಪಿಯಿಂದ 27 ಅಭ್ಯರ್ಥಿಗಳು, ಕಾಂಗ್ರೆಸ್‌ನಿಂದ 26, ಎಎಪಿಯಿಂದ 10, ಬಿಎಸ್‌ಪಿ ಪಕ್ಷದಿಂದ ಒಬ್ಬರು, ಪಕ್ಷೇತರ ಅಭ್ಯರ್ಥಿಗಳಾಗಿ 100 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ಈ ಮಾಹಿತಿ ನೀಡಿದೆ.
ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20, ನಾಮಪತ್ರ ಪರಿಶೀಲನೆಗೆ ಏಪ್ರಿಲ್ 21, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನ. ಮೇ 10ರಂದು ಮತದಾನ ನಡೆಯಲಿದೆ. ಮೇ 15ರ ಒಳಗೆ ಚುನಾವಣೆ ಪ್ರಕ್ರಿಯೆಗಳು ಮುಕ್ತಾಯವಾಗಲಿದೆ.