ಬೆಂಗಳೂರು : ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿರುವ ಅವರು, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾನು ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಯ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ರಾಜಕೀಯಕ್ಕೆ ಧುಮುಕಿದ ನನ್ನನ್ನು ಮೂರು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಅಲ್ಲದೆ, ರಾಜ್ಯ ರಾಜಕಾರಣದವರೆಗೆ ಬೆಳೆಸಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಗಳಿಗೆ ನಾನು ಎಂದೆಂದೂ ಚಿರಋಣಿ ಎಂದು ಸುಧಾಕರ್ ಸ್ಮರಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಯ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ರಾಜಕೀಯಕ್ಕೆ ಧುಮುಕಿದ ನನ್ನನ್ನು ಮೂರು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಲ್ಲದೆ, ರಾಜ್ಯ ರಾಜಕಾರಣದ ವರೆಗೆ ಬೆಳೆಸಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಗಳಿಗೆ ನಾನು ಎಂದೆಂದೂ ಚಿರಋಣಿ.
2/3 pic.twitter.com/YQIunju71M
— Dr Sudhakar K (@mla_sudhakar) April 13, 2023
ಇದನ್ನೂ ಓದಿ : ಏ.18ರಂದು ಜೆಡಿಎಸ್ ಅಭ್ಯರ್ಥಿಯಾಗಿ ದತ್ತಾ ನಾಮಪತ್ರ ಸಲ್ಲಿಕೆ
ನವ ಚಿಕ್ಕಬಳ್ಳಾಪುರ ಕಟ್ಟುವ ನನ್ನ ಸಂಕಲ್ಪ
ಈಗ ನಾಲ್ಕನೇ ಬಾರಿ ಜನರ ಆಶೀರ್ವಾದ ಪಡೆಯಲು ನಾನು ಬಯಸಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿಸುವ ಸಂಕಲ್ಪವನ್ನು ಹೊಂದಿದ್ದೇನೆ. ನವ ಚಿಕ್ಕಬಳ್ಳಾಪುರ ಕಟ್ಟುವ ನನ್ನ ಸಂಕಲ್ಪಕ್ಕೆ ಕ್ಷೇತ್ರದ ಜನರು ಕೈಜೋಡಿಸುತ್ತಾರೆ. ನನ್ನನ್ನು ಮತ್ತೊಮ್ಮೆ ಆಶೀರ್ವದಿಸುತ್ತಾರೆ ಎಂಬ ಅಚಲ ವಿಶ್ವಾಸ ನನ್ನದು ಎಂದು ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿಯಾಗಿ ನಾನು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ಅದಕ್ಕೂ ಮುನ್ನ ನಮ್ಮ ಮನೆ ದೇವರಾದ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತನಾಗಿ ತೆರಳಿ ಸ್ವಾಮಿಯ ದರ್ಶನ ಪಡೆದುಕೊಂಡೆ.@BJP4Karnataka pic.twitter.com/ATtuPI3NVV
— Dr Sudhakar K (@mla_sudhakar) April 13, 2023
ನಾಮಪತ್ರಕ್ಕೂ ಮುನ್ನ ಟೆಂಪಲ್ ರನ್
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಡಾ.ಕೆ ಸುಧಾಕರ್ ಅವರು ಮನೆ ದೇವರಾದ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳಿ ದರ್ಶನ ಪಡೆದಿದ್ದಾರೆ.