Friday, November 22, 2024

MLC ಸ್ಥಾನಕ್ಕೆ ಸವದಿ ರಾಜೀನಾಮೆ ; ಕಾಂಗ್ರೆಸ್​ಗೆ ಸೇರ್ಪಡೆ

ಬೆಂಗಳೂರು: ರಾಜ್ಯ ವಿಧಾನಸಭೆಗೆ (Karnataka Assembly Election 2023) ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ವಿದ್ಯಮಾನಗಳು ಜರಗುತ್ತಿವೆ. ಅದರಲ್ಲಂತು ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುತ್ತಿದಂತೆ ಬಂಡಾಯ ಮತ್ತು ಪಕ್ಷಾಂತರ ಜೋರಾಗಿದೆ.

ಹೌದು, ಬಿಜೆಪಿಯ ಕೆಲವು ಆಕಾಂಕ್ಷಿಗಳಿಗೆ ಮತ್ತು ಹಾಲಿ ಶಾಸಕರಿಗೆ ಟಿಕೆಟ್​ ಸಿಕ್ಕಿಲ್ಲ. ಇದರಿಂದ ಅಸಮಾಧಾನಗೊಂಡ ನಾಯಕರು ಬಂಡಾಯವೆದ್ದಿದ್ದು, ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆ ನೀಡಿ ಬೇರೆ ಪಕ್ಷದ ಮೂಲಕ ಅಥವಾ ಪಕ್ಷೇತರವಾಗಿ ಕಣಕ್ಕಿಳಿಯಲು ನಿರ್ಧಿರಿಸಿದ್ದಾರೆ.

ಇನ್ನೂ  ಅಥಣಿ (Athani) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮಣ ಸವದಿ (Laxman Savdi) ಅವರಿಗೂ ಟಿಕೆಟ್​​ ಕೈ ತಪ್ಪಿದ್ದು, ಪಕ್ಷದ ವಿರುದ್ಧ ಸೆಡ್ಡು ಹೊಡೆದಿದ್ದಾರೆ. ಈ ಹಿನ್ನೆಲೆ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್​ ಸೇರಲಿದ್ದಾರೆ.

ಈ ಬಗ್ಗೆ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಭೇಟಿಯಾಗಿ, ರಾಜೀನಾಮೆ ಸಲ್ಲಿಸುವೆ. ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ. ಬಿಜೆಪಿ ತೊರೆಯಲು ನಿನ್ನೆಯೇ ನಿರ್ಧಾರ ಮಾಡಿದ್ದೇನೆ. ಹಾಗಾಗಿ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗಲ್ಲ. ನಾನು ಇನ್ನೂ ಬಿಜೆಪಿ ಮನೆಯಲ್ಲೇ ಇದ್ದೇನೆ, ಬೇರೆ ಮಾತಾಡಲ್ಲ. ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಬೇರೆ ವಿಚಾರದ ಚರ್ಚೆ ಎಂದು ಹೇಳಿದ್ದಾರೆ.

ನಾನು ಅಥಣಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ.ನನ್ನ ಮಗ, ಪತ್ನಿಗೆ ಟಿಕೆಟ್‌ ಕೊಡಿ ಎಂದು ಕೇಳಿಲ್ಲ. ನನ್ನ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿ ಎಂದಿದ್ದೇನೆ‘ ಸಿದ್ದರಾಮಯ್ಯ ಜೊತೆ ಸಭೆ ಬಳಿಕ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES