ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇಂದು ಮತ್ತೆ ಆರು ಅಭ್ಯರ್ಥಿಗಳ ಲೀಸ್ಟ್ ಬಿಡುಗಡೆಯಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ. ಇದರಲ್ಲಿ ಇತ್ತೀಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ನಾಯಕರಿಗೆ ಮಣೆ ಹಾಕಲಾಗಿದೆ.
ರಘು ಆಚಾರ್ ಗೆ ಚಿತ್ರದುರ್ಗ ಟಿಕೆಟ್
ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರು ಜೆಡಿಎಸ್ ಅಭ್ಯರ್ಥಿಗಳು ಎಂದು ಮಾಧ್ಯಮಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಪ್ರಕಟಿಸಿದರು.
ಇದನ್ನೂ ಓದಿ : ‘ಜೆಡಿಎಸ್ ಶಕ್ತಿ’ ಏನು ಅಂತಾ ತೋರಿಸುತ್ತೇವೆ : ನಾಪಂಡ ಮುತ್ತಪ್ಪ
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮುಖಂಡ ಶ್ರೀ ಎನ್ ಆರ್ ಸಂತೋಷ್ ಅವರು ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷವನ್ನು ತೊರೆದು ಅಧಿಕೃತವಾಗಿ ಜಾತ್ಯತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. pic.twitter.com/kDAJ9EDzHV
— Janata Dal Secular (@JanataDal_S) April 15, 2023
ಸಂತೋಷ್, ದೇವರಾಜ್ ಜೆಡಿಎಸ್ ಸೇರ್ಪಡೆ
ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್.ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು. ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಇಬ್ಬರೂ ನಾಯಕರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.