ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಹೌದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಕಟ್ಟಿ ನಾನು ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲಾ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ನಾನು ಮಾಡಿದ್ದೇನೆ. ಪಕ್ಷ ಕೊಟ್ಟ ಎಲ್ಲಾ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಅದ್ರೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಕಳೆದ 6 ತಿಂಗಳಿನಿಂದ ನನ್ನನ್ನು ಕಡೆಗಣಿಸಿದ್ದರು ಅದಕ್ಕಾಗಿ ನಾನು ಬಿಕೆಪಿ ಪಕ್ಷ ತೊರೆದಿದ್ದಾನೆ. ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.
ಮೂರು ದಶಕಗಳ ಹೆಚ್ಚಿನ ನಂಟು ಮುರಿದುಕೊಂಡ ಮಾಜಿ ಸಿಎಂ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(Jagadish Shettar) ಅವರು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್(Congress) ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿ ಇದರೊಂದಿಗೆ 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯೊಂದಿಗಿ ನಂಟು ಕಳೆದುಕೊಂಡರು.