ನವದೆಹಲಿ: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ಗೆ ಸುಪ್ರೀಂ ಕೋರ್ಟ್(supreme court) ಬಿಗ್ ರಿಲೀಫ್ ನೀಡಿದೆ.
ಹೌದು,ಕರ್ನಾಟಕ ವಿಧಾನಭೆ ಚುನಾವಣೆ ತಯಾರಿಯಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಡಿಸಿ ಗೌರಿಶಂಕರ್ಗೆ(DC Gaurishankar)ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023)ಸ್ಪರ್ಧಿಸಲು ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಪ್ರಕರಣವೇನು?
2018ರ ಚುನಾವಣೆಯಲ್ಲಿ ಮತದಾರರಿಗೆ ವಿಮಾ ಪಾಲಿಸಿಯ ನಕಲಿ ಬಾಂಡ್ ವಿತರಿಸಿದ ಕೇಸ್‌ಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್ ಪರ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು.
ಇನ್ನೂ ಹೈಕೋರ್ಟ್ ನೀಡಿದ ಒಂದು ತಿಂಗಳ ಅವಧಿಯಲ್ಲಿ ಗೌರಿಶಂಕರ್ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ತರಬೇಕಿತ್ತು. ಇಲ್ಲದಿದ್ದರೆ ಅನರ್ಹ ಭೀತಿ ಎದುರಿಸಬೇಕಾಗಿತ್ತು. ಹೀಗಾಗಿ ಗೌರಿ ಶಂಕರ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್, ಚುನಾವಣೆಗೆ ಸ್ಪರ್ಧೆಗೆ ಅನುಮತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಇದರಿಂದ ಗೌರಿ ಶಂಕರ್ಗೆ ಇದ್ದ ಆತಂಕ ಸದ್ಯಕ್ಕೆ ದೂರವಾಗಿದೆ.