ಬೆಂಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಪ್ರಚಾರ ಕಾರ್ಯಗಳನ್ನು ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. ಆದರೆ ನಿಗದಿಪಡಿಸಲಾಗಿದ್ದ ಅಮಿತ್ ಶಾ ರೋಡ್ ಶೋವನ್ನು ಮಳೆಯ ಹಿನ್ನೆಲೆ ರದ್ದುಗೊಳಿಸಲಾಗಿದೆ.
ಇದನ್ನೂ ಓದಿ : ಇಂದು ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ
ಹೌದು, ಮತ್ತೊಮ್ಮೆ ಗದ್ದುಗೆ ಏರಲು ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದು,ಎಲೆಕ್ಷನ್ನಲ್ಲಿ ವೇಳೆಯಲ್ಲಿ ವಿಜಯಶಾಲಿಯಾಗಲು ಏನೆಲ್ಲಾ ಮಾಡಬೇಕು ಎಂಬುವುದರ ಕುರಿತು ಬಿಜೆಪಿ ನಾಯಕರ ಜೊತೆ ಸಭೆ ಹಮ್ಮಿಕೊಂಡಿದ್ದರು. ಇದರ ಜೊತೆಗೆ ರೋಡ್ ಶೋ ಕೂಡ ಇತ್ತು. ಅಂದ್ರೆ ಮಳಿಯಿಂದ ಎಲ್ಲಾ ಕಾರ್ಯಕ್ರಮಗಳು ಸ್ಥಗಿತವಾಗಿದ್ದೇವೆ.
ಭಾರೀ ಮಳೆಯಿಂದಾಗಿ ದೇವನಹಳ್ಳಿ ಜನತೆಯೊಂದಿಗಿರಲು ಸಾಧ್ಯವಾಗಿಲ್ಲ. ಪ್ರತಿಕೂಲ ಹವಾಮಾನದ ಸಂದರ್ಭದಲ್ಲೂ ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮಕ್ಕೆ ಕೃತಜ್ಞನಾಗಿದ್ದೇನೆ.
ಪ್ರಚಾರಕ್ಕಾಗಿ ದೇವನಹಳ್ಳಿಗೆ ಶೀಘ್ರದಲ್ಲೇ ಭೇಟಿ ನೀಡುತ್ತೇನೆ.
ಕರ್ನಾಟಕದ ಜನರ ಉತ್ಸಾಹವು ಬಿಜೆಪಿಯು ಬೃಹತ್ ಗೆಲುವು ಸಾಧಿಸಲಿದೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ. https://t.co/7bLUkjwwKh
— Amit Shah (@AmitShah) April 21, 2023
ಇನ್ನೂ ಅಮಿತ್ ಶಾ ರೋಡ್ ಶೋ ರದ್ದಾಗುತ್ತಿದ್ದಂತೆಯೇ ಅವರಿಗಾಗಿ ತರಿಸಲಾಗಿದ್ದ 250 ಕೆಜಿ ತೂಕದ ಸೇಬಿನ ಹಾರವನ್ನು ಜನರು ಚಿಂದಿ ಚಿಂದಿ ಮಾಡಿದ್ದಾರೆ. ಹಾರಕ್ಕೆ ಕೈ ಹಾಕಿ ಸೇಬುಗಳನ್ನು ಜನರು ಕಿತ್ತುಕೊಂಡು ಹೋಗಿದ್ದು, ಕ್ಷಣಾರ್ಧದಲ್ಲೇ ಹಾರದಲ್ಲಿದ್ದ ಸೇಬುಗಳೆಲ್ಲವೂ ಖಾಲಿಯಾಗಿ ಹೋಗಿದೆ.