ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಳ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಿನಲ್ಲಿ ಚಂಡಮಾರುತ ಸಂಭವಿಸುವ ಸಾಧ್ಯತೆ ಇರುವುದರಿಂದ 5 ದಿನಗಳ ಕಾಲ ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿದ್ದ ಸಮುದ್ರದ ಮೇಲಿನ ಸುಳಿಗಳು ಸೈಕ್ಲೋನ್ ರೂಪ ಪಡೆದುಕೊಳ್ಳಬಹುದು. ಈ ಕಾರಣದಿಂದ ಏಪ್ರಿಲ್ 30ರವರೆಗೆ ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ : ಆರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಆಗುವ ಸಾಧ್ಯತೆಯಿದೆ. ಈ ಕಾರಣಕ್ಕೆ ಇಂದಿನಿಂದ ಮೂರು ದಿನ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.