ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಇಂದು ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಜೆಡಿಎಸ್ ಸರ್ಕಾರ ಈ ಬಾರಿ ರಚನೆಯಾದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ, ರೈತರಿಗೆ ಹಾಗೂ ಆಟೋ ಚಾಲಕರು ಸೇರಿದಂತೆ ಎಲ್ಲರಿಗೂ ಭರಪೂರ ಕೊಡುಗೆ ನೀಡುವ ಭರವಸೆ ನೀಡಿದ್ದಾರೆ.
ಪ್ರಮುಖವಾಗಿ ರೈತರ ಮಕ್ಕಳನ್ನು ಮದುವೆಯಾಗುವವರಿಗೆ 2 ಲಕ್ಷ ರೂ. ನೀಡುತ್ತೇವೆ ಎಂಬ ಭರವಸೆ ನೀಡಿರುವ ಕುಮಾರಸ್ವಾಮಿ ಅವರು, ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ಮತ್ತೆ ಜಾರಿ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಒಟ್ಟು 9 ವಿಭಾಗಗಳಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಜೆಡಿಎಸ್ ಬಿಡುಗಡೆ ಮಾಡಿದ್ದು, ಸಾಮಾಜಿಕ ಭದ್ರತೆಗಳು, ಪಂಚರತ್ನ ಯೋಜನೆ, ಕೈಗಾರಿಕಾ ಅಭಿವೃದ್ಧಿ, ಸಾರಿಗೆ ಮತ್ತು ಪ್ರವಾಸೋದ್ಯಮ, ಜಲಧಾರೆ, ರಸ್ತೆ ಅಭಿವೃದ್ಧಿ-ಸಂಪರ್ಕ ಸೇತುವೆಗಳು, ಇಂಧನ ವಲಯ, ಆಡಳಿತ ಸುಧಾರಣೆ, ಕೃಷಿ ಮತ್ತು ಹೈನುಗಾರಿಕೆಯ ವಿಭಾಗದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ : ನಾನ್ಯಾಕೆ ಸುಮಲತಾ ಬಗ್ಗೆ ಟೀಕೆ ಮಾಡಲಿ : ಎಚ್.ಡಿ ಕುಮಾರಸ್ವಾಮಿ
ಪ್ರಣಾಳಿಕೆಯ ಪ್ರಮುಖ ಅಂಶಗಳು
- ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸುವುದು
- ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾ
- ವಿಧವಾ ವೇತನ 900 ರೂ. ನಿಂದ 2,500ಕ್ಕೆ ಹೆಚ್ಚಳ
- ವರ್ಷಕ್ಕೆ 5 ಅಡುಗೆ ಅನಿಲ ಸಿಲಿಂಡರ್ ಉಚಿತ
- ರೈತಬಂಧು ಯೋಜನೆ ಜಾರಿ
- ರೈತರನ್ನು ಮದುವೆಯಾಗುವ ಯುವತಿಯರಿಗೆ 2 ಲಕ್ಷ ರೂ.
- ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು 2 ಸಾವಿರ ರೂ.
- ಖಾಸಗಿ ಸೆಕ್ಯೂರಿಟಿ ಗಾರ್ಡ್ ಗಳಿಗೆ ಪ್ರತಿ ತಿಂಗಳು 2 ರೂ.