ಬೆಂಗಳೂರು : ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಹೊಸ ದಾಖಲೆಯನ್ನು ಬರೆದಿದ್ದಾರೆ. ಈ ಸಾಧನೆ ಮಾಡಿದ ಭಾರತದ 8ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.
ಹೌದು, ಭಾರತದ ಪರ 300 ಟಿ20 ಪಂದ್ಯಗಳನ್ನು ಆಡಿದ 8ನೇ ಆಟಗಾರ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಭಾಜನರಾಗಿದ್ದಾರೆ. ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಭಾರತ ಪರ ಅತಿ ಹೆಚ್ಚು ಟಿ20 ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ನಿನ್ನೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ತಂಡ 32 ರನ್ಗಳಿಂದ ಸೋಲನುಭವಿಸಿತ್ತು. ಆ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನದಿಂದ 3ನೇ ಸ್ಥಾನಕ್ಕೆ ಇಳಿದಿದೆ. ಆದರೆ ಈ ಸೋಲಿನ ನಡುವೆಯೂ ಚೆನ್ನೈ ಸ್ಟಾರ್ ಆಲ್ ರೌಂಡರ್ ಜಡೇಜಾ ಅಪರೂಪದ ದಾಖಲೆ ಪೂರೈಸಿದ್ದಾರೆ.
Magical since the start. ✨
Million whistles in between!🥳#WhistlePodu #RRvCSK #Yellove #IPL2023 🦁💛 @imjadeja pic.twitter.com/Z8W9Znrngk— Chennai Super Kings (@ChennaiIPL) April 27, 2023
ಇದನ್ನೂ ಓದಿ : ಚಿನ್ನಸ್ವಾಮಿಯಲ್ಲಿ ‘ಕಿಂಗ್ ಕೊಹ್ಲಿ’ ಮತ್ತೊಂದು ದಾಖಲೆ
ರೋಹಿತ್ ಶರ್ಮಾ ಭಾರತ ಪರ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿ ಮೊದಲ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಆರ್ ಸಿಬಿ ಆಟಗಾರ ದಿನೇಶ್ ಕಾರ್ತಿಕ್ ಇದ್ದಾರೆ. ಚೆನ್ನೈ ನಾಯಕ ಮಹೇಂದ್ರ ಸಿಂಗ್ ಧೋನಿ, ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ, ಸುರೇಶ್ ರೈನಾ, ಶಿಖರ್ ಧವನ್, ಆರ್. ಅಶ್ವಿನ್ ನಂತರ ರವೀಂದ್ರ ಜಡೇಜಾ ಭಾರತದ ಪರ 300 ಟಿ20 ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಟೂರ್ನಿಯಲ್ಲಿ ಚೆನ್ನೈ ಅದ್ಭುತ ಪ್ರದರ್ಶನ
ಇನ್ನೂ, ಚೆನ್ನೈ ಸೂಪರ್ ಕಿಂಗ್ಸ್ ಪ್ರಸಕ್ತ ಸಾಲಿನ (2023) ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಈ ಸೀಸನ್ನಲ್ಲಿ 8 ಪಂದ್ಯಗಳನ್ನಾಡಿರುವ ಚೆನ್ನೈ ತಂಡ 10 ಪಾಯಿಂಟ್ಸ್ ನೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಕಳೆದ ಬಾರಿಯ (2022) ಸೀಸನ್ ನಲ್ಲಿ ಚೆನ್ನೈ ನಿರಾಶಾದಾಯಕ ಪ್ರದರ್ಶನ ನೀಡಿತ್ತು.