Friday, November 22, 2024

‘ಹಿರೆಕೇರೂರು ಸರ್ವಾಂಗಿಣ ಅಭಿವೃದ್ಧಿ’ಗೆ ಶ್ರಮಿಸಿದ್ದೇನೆ : ಸಚಿವ ಬಿ.ಸಿ ಪಾಟೀಲ್

ಬೆಂಗಳೂರು : ಸಚಿವ ಹಾಗೂ ಹಿರೆಕೇರೂರಿನ ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್ ಅವರು ಇಂದು ತಮ್ಮ ಮತಕ್ಷೇತ್ರದ ಹಿರೇಮತ್ತೂರು ಗ್ರಾಮದಲ್ಲಿ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು.

ಅದ್ದೂರಿ ಸ್ವಾಗತ ನೀಡಿದ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಬಿ.ಸಿ ಪಾಟೀಲ್ ಅವರು, ಹಿರೆಕೇರೂರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಹೇಳಿದರು.

ಹಿರೇಮತ್ತೂರು ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕೆರೆ ತುಂಬಿಸುವ ಹಿನ್ನೆಲೆ ಆಸುಂಡಿ ಏತನೀರಾವರಿ, ಸರ್ವಜ್ಣ ಏತನೀರಾವರಿ ಯೋಜನೆಯಿಂದ ಆರಂಭಿಸಿದ್ದೇನೆ. ರಸ್ತೆ ಅಭಿವೃದ್ದಿ ಪಡಿಸಲಾಗಿದ್ದು ಕ್ಷೇತ್ರದ ಸರ್ವಾಂಗಿಣ ಅಭಿವೃದ್ದಿಗೆ ಶ್ರಮಿಸಿದ್ದೆನೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ಕಾಗಿ ಮತ್ತೆ ಈ ಬಾರಿ ಮತ ನೀಡುವ ಮೂಲಕ ಆಶಿರ್ವದಿಸಿ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿ.ಸಿ ಪಾಟೀಲ್ ಅವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ  ಓದಿ : ‘ಕೌರವ ಪಾಟೀಲ್’ ಪರ ನಟ ಸುದೀಪ್ ಅಬ್ಬರದ ಪ್ರಚಾರ

ಕೈಬಿಟ್ಟುಕಮಲಹಿಡಿದ ಗ್ರಾ.ಪಂ ಸದಸ್ಯರು

ಹಿರೇಕೆರೂರ ಮತಕ್ಷೇತ್ರದ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರಚಾರದ ವೇಳೆ ಕುಂಚೂರು ಗ್ರಾಮಪಂಚಾಯಿತಿ ಸದಸ್ಯರಾದ ಮಹೇಶಪ್ಪ ಮಾರತಾಂಡಪ್ಪ ಬಣಕಾರ್, ತಿಪ್ಪೇಶ್ ಚನ್ನಬಸಪ್ಪ ಶಿವಪ್ಪನವರ್ ಹಾಗೂ ಬೆಂಬಲಿಗರು ಕಾಂಗ್ರೆಸ್ ತೊರೆದು ಸಚಿವ ಬಿ.ಸಿ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಬಳಿಕ, ಹಿರೇಕೆರೂರು ಕ್ಷೇತ್ರದ ಲಿಂಗದೇವರಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಪ್ರಚಾರ ಕೈಗೊಂಡು, ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯ ಸಚೇತಕರಾದ ಡಿ.ಎಂ ಸಾಲಿ, ಈಟೇರವರು, ಪಾಲಾಕ್ಷ ಗೌಡ್ರು ದೊಡ್ಡ ಗೌಡ್ರು, ಬಿ.ಎನ್ ಬಣಕಾರ್, ಆರ್.ಎನ್ ಗಂಗೊಳ, ಲಿಂಗರಾಜ ಚಪ್ಪರದಳ್ಳಿ, ಗಂಗಾಧರ್, ಪುತ್ರಿ ಸೃಷ್ಟಿ ಪಾಟೀಲ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES