ಬೆಂಗಳೂರು : ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಹಗಲಿರುಳು ಶ್ರಮಿಸಿದ್ದೇನೆ ಎಂದು ಅಬಕಾರಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆ.ಸಿ ನಗರದ ಕುರುಬರಹಳ್ಳಿಯ 1ನೇ ಮುಖ್ಯ ರಸ್ತೆಯಲ್ಲಿ ಸಚಿವ ಕೆ.ಗೋಪಾಲಯ್ಯ ಅವರು ಇಂದು ನೂರಾರು ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಮತಯಾಚನೆ ವೇಳೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಹಗಲಿರುಳು ಶ್ರಮಿಸಿದ್ದೇನೆ. ವಿಧಾನಸೌಧದ ಒಳಗೆ ಮತ್ತು ಹೊರಗೆ ಕ್ಷೇತ್ರದ ವಿಚಾರವಾಗಿ ಸರ್ಕಾರದ ಸಚಿವನಾಗಿ ಮಾತನಾಡಿದ್ದೇನೆ. ಶಾಸಕನಾಗಿ, ಸಚಿವನಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯೂ ಸಹ ಬಹುಮತಗಳಿಂದ ನನ್ನನ್ನು ಗೆಲ್ಲಿಸಬೇಕಾಗಿ ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದರು.
ಇದನ್ನೂ ಓದಿ : ಬಿಜೆಪಿ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ
80 ಕೋಟಿ ಜನರಿಗೆ 10 ಕೆಜಿ ಅಕ್ಕಿ
ಕೋವಿಡ್ ಸಮಯದಲ್ಲಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರವು 80 ಕೋಟಿ ಜನರಿಗೆ ತಲಾ 10 ಕೆಜಿ ಅಕ್ಕಿಯನ್ನು ನೀಡಿದೆ. ಕ್ಷೇತ್ರದ ಜನರನ್ನು ಹಸಿವಿನಿಂದ ಮುಕ್ತಗೊಳಿಸಲು ಕೋವಿಡ್ ಅವಧಿಯಲ್ಲಿ ಆಹಾರ ಕಿಟ್ ಮತ್ತು ಆರೋಗ್ಯ ಕಿಟ್ ಗಳನ್ನು ವಿತರಿಸಲಾಯಿತು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ರೈಲ್ವೆ ನಾರಾಯಣ, ಶಿವಾನಂದಮೂರ್ತಿ, ಗೋವಿಂದ, ಯತಿರಾಜ್ ನಾಯ್ಡು, ಶಿಲ್ಪ ನಾಗರಾಜ್, ರಾಘವೇಂದ್ರ ನಾಗರಾಜ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದರು.