Monday, November 25, 2024

ಬಹಿರಂಗ ಪ್ರಚಾರಕ್ಕೆ ತೆರೆ, ಮನೆ-ಮನೆ ಪ್ರಚಾರಕ್ಕೆ ಮಾತ್ರ ಅವಕಾಶ

ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಇಂದಿನಿಂದಲೇ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ.

ಚುನಾವಣಾ ಆಯೋಗದ ಆದೇಶದಂತೆ ರಾಜ್ಯಾದ್ಯಂತ ಪಕ್ಷಗಳ ಸಭೆ, ಸಮಾರಂಭ, ಉತ್ಸವ, ರ್ಯಾಲಿಗಳಿಗೆ ಅಧಿಕೃತವಾಗಿ ತೆರೆ ಎಳೆಯಲಾಗಿದೆ.

ಇನ್ನೂ ಕ್ಷೇತ್ರದಲ್ಲಿ ಅಭ್ಯರ್ಥಿ ಹೊರತುಪಡಿಸಿ ಬೇರೆ ವ್ಯಕ್ತಿಗಳು ವಾಸ್ತವ್ಯ ಹೂಡುವಂತಿಲ್ಲ. ಯಾವುದೇ ಧ್ವನಿ ವರ್ಧಕಗಳ ಬಳಕೆಗೆ ಅವಕಾಶವಿಲ್ಲ. ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿ ಸೇರಿ 6 ಜನರಿಗೆ ಮಾತ್ರ ಮನೆಮನೆ ಪ್ರಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ 15 ಸಾವಿರ ಖಾಕಿ ಕಣ್ಗಾವಲು!

ಮೇ 10 ರಂದು ರಾಜ್ಯದಲ್ಲಿ ಏಕಕಾಲದಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತದೆ. ಮೇ 13 ರಂದು ಆಯಾ ವಿಧಾನಸಭಾ ಕ್ಷೇತ್ರಗಳಲ್ಲೇ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಾರ್ಟಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 2,613 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾದ ದಿನದಿಂದ , ಚುನಾವಣೆಗೆ ನಾಮಪತ್ರ ಸಲ್ಲಿಸಿ, ಇಂದಿನವರೆಗೆ ಅಭ್ಯರ್ಥಿಗಳು ಮತದಾರರ ಮನವೊಲಿಸಲು ನಾನಾ ರೀತಿಯ ಕಸರತ್ತು ನಡೆಸಿದ್ದರು.

RELATED ARTICLES

Related Articles

TRENDING ARTICLES