ಇಂದು ಚುನಾವಣಾ ಹಬ್ಬಕ್ಕೆ ಕೆಲವೇ ಕ್ಷಣಗಳಲ್ಲಿ ಮಾತ್ರ ಬಾಕಿ ಇದ್ದು, 224 ಕ್ಷೇತ್ರಗಳಲ್ಲಿ ಇಂದು 7ಗಂಟೆಯಿಂದ ಮತದಾನ ಶುರುವಾಗಲಿದೆ.
ಹೌದು, ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾದ ಕರ್ನಾಟಕ ವಿಧಾನಸಭಾ ಚುನಾವಣೆಯ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಮೇ.10) ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ
ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಅಣಕು ಮತದಾನ ಆರಂಭ
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿಯಿಂದ ಇವಿಎಂ ಪರಿಶೀಲನೆಗಾಗಿ ಅಣಕು ಮತದಾನ ಮಾಡುತ್ತಿದ್ದಾರೆ. ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೆಳಗಾವಿ, ವಿಜಯಪುರ, ಬಳ್ಳಾರಿ, ರಾಯಚೂರು, ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ತುಮಕೂರು, ಚಿತ್ರದುರ್ಗ, ಮೈಸೂರು, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ದಾವಣಗೆರೆ, ಕೊಪ್ಪಳ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಯಾದಗಿರಿ, ಬೆಂಗಳೂರು ಗ್ರಾಮಾಂತರ ಮತ್ತು ಗದಗ ಜಿಲ್ಲೆಯ ಮತಗಟ್ಟೆಗಳಲ್ಲಿ ಅಣಕು ಮತದಾನ ನಡೆಯುತ್ತಿದೆ.