Thursday, December 19, 2024

ಮತಯಂತ್ರ ಪುಡಿಪುಡಿ ಮಾಡಿದ್ದು ಯಾವ ಕಾರಣಕ್ಕೆ ಗೊತ್ತಾ?

ವಿಜಯಪುರ : ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮಸ್ಥರು ಕಾಯ್ದಿರಿಸಲಾಗಿದ್ದ ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಮಷಿನ್‌ಗಳನ್ನು ಒಡೆದು ಹಾಕಿದ್ದಾರೆ. ಘಟನೆ ಕುರಿತು ಇದೀಗ ಹೆಚ್ಚಿನ ಮಾಹಿತಿ ಲಭ್ಯವಾಗಿದೆ.

ಬಿಸನಾಳ ಮತ್ತು ಡೊಣ್ಣೂರಿನಿಂದ ಹೆಚ್ಚುವರಿ ಮತಯಂತ್ರಗಳನ್ನು ಮಸಬಿನಾಳ ಗ್ರಾಮಕ್ಕೆ ತರಲಾಗುತ್ತಿತ್ತು. ಇದನ್ನು ಕಂಡ ಮತದಾರರು ಮತದಾನವನ್ನು ಅರ್ಧಕ್ಕೆ ಸ್ಥಗಿತಗೊಳಿಸುತ್ತಾರೆಂದು ತಪ್ಪಾಗಿ ಅರ್ಥೈಸಿಕೊಂಡು ವಾಹನದಲ್ಲಿದ್ದ ಮತಯಂತ್ರಗಳನ್ನು ಧ್ವಂಸ ಮಾಡಿದ್ದಾರೆ. ಈ ವೇಳೆ ಅಧಿಕಾರಿಗಳು ಬಂದಿದ್ದ ಕಾರನ್ನೂ ಜಖಂ ಮಾಡಲಾಗಿದೆ.

ಗ್ರಾಮಸ್ಥರು ಚುನಾವಣಾ ಕಾರ್ಯಕ್ಕೆ ನೇಮಕಗೊಂಡಿದ್ದ ಸಿಬ್ಬಂದಿ ಮೇಲೂ ಹಲ್ಲೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಕೆಲ ಮತದಾರರ ಮೇಲೆ ಲಾಠಿಚಾರ್ಜ್ ಕೂಡ ಮಾಡಿದ್ದಾರೆ. ಯಾವ ಕಾರಣಕ್ಕೆ ಘಟನೆ ನಡೆದಿದೆ ಎಂಬುದು ಇದೀಗ ತಿಳಿದುಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿಯೊಬ್ಬರು, ಈ ಕುರಿತು ಹಿರಿಯ ಅಧಿಕಾರಿ ಮಾಹಿತಿ ನೀಡುತ್ತಾರೆ ಎಂದು ಹೇಳಿದ್ದಾರೆ.

25 ಮಂದಿ ಪೊಲೀಸರ ವಶ

ಇವಿಎಂಗಳನ್ನು ನಾಶಪಡಿಸಲು ಕಾರಣಗಳೇನು ಎಂಬುದು ಇದುವರೆಗೆ ತಿಳಿದುಬಂದಿಲ್ಲ. ಈ ಸಂಬಂಧ ಮಸಬಿನಾಳ ಗ್ರಾಮದ 25 ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದು ಇವಿಎಂ ನಾಶಪಡಿಸಲು ಕಾರಣಗಳೇನು ಎಂಬ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ.

RELATED ARTICLES

Related Articles

TRENDING ARTICLES