ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ನಾಳೆ (ಮೇ 13) ಮದ್ಯ ಮಾರಾಟ ಸ್ಥಗಿತವಾಗಲಿದ್ದು, ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದಂತಾಗಿದೆ.
ಮೇ.13ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿವರೆಗೂ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಹಿನ್ನೆಲೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ನಾಳೆ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯ ನಿಷೇಧಿಸಲಾಗಿರುತ್ತದೆ. ಬೆಳಗ್ಗೆಯಿಂದಲೇ ಬಾರ್, ರೆಸ್ಟೋರೆಂಟ್‌ಗಳು ಬಂದ್ ಇರಲಿದೆ. ಇನ್ನೂ ರೆಸ್ಟೋರೆಂಟ್ ಗಳಲ್ಲಿ ಊಟ ಮಾಡಲು ಮಾತ್ರ ಅವಕಾಶವಿರುತ್ತದೆ.
ಇದನ್ನೂ ಓದಿ : ಮತ ಏಣಿಕೆ ಪ್ರಕ್ರಿಯೆ ಹೇಗಿರುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಇನ್ನೂ ರಾಜ್ಯಾದ್ಯಂದತ ಮೇ 13, 2023ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತದಾನ ಮತ್ತು ಮತ ಏಣಿಕೆಯ ಸಂದರ್ಭದಲ್ಲಿ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ, ಶುಷ್ಕ ದಿನ ಎಂದು ಘೋಷಿಸಲಾಗಿದೆ.
ಬೆಳಗ್ಗೆ 8ಕ್ಕೆ ಮತ ಎಣಿಕೆ ಶುರು
ನಾಳೆ ಬೆಳಗ್ಗೆ 8 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲೇ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನದ ವೇಳೆಗೆ ಬಹುತೇಕ ಕ್ಷೇತ್ರಗಳ ಚಿತ್ರಣ ಬಯಲಾಗಲಿದೆ. ಸಂಜೆ ಬಳಿಕ ಪೂರ್ಣ ಫಲಿತಾಂಶ ಸಿಗಲಿದೆ.