Sunday, October 27, 2024

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಗ್ರೀನ್ ಸಿಗ್ನಲ್!

ಮುಂಬೈ : ಮಹಾರಾಷ್ಟ್ರದ ರಾಜಕೀಯ ಹೈಡ್ರಾಮಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್​ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆಗೆ ಅಸ್ತು ಎಂದಿದೆ.
ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನೆ, ಎನ್​​ಸಿಪಿ ವಿಫಲವಾದ ಬೆನ್ನಲ್ಲೇ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಭಾಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಪ್ರಧಾನಿ ನೇತೃತ್ವದ ಸಂಪುಟ ಸಭೆಯಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಒಪ್ಪಿಗೆ ಸಿಕ್ಕಿದೆ.
ಸರ್ಕಾರ ರಚಿಸಲು  ಎನ್​ಸಿಪಿಗೆ ಇಂದು ರಾತ್ರಿ 8.30ರವರೆಗೆ ಕಾಲಾವಕಾಶ ನೀಡಲಾಗಿತ್ತು. ಅಗತ್ಯ ಸಂಖ್ಯಾಬಲ ಒಗ್ಗೂಡಿಸಲು ಎನ್​ಸಿಪಿ ಶತಾಯಗತಾಯ ಪ್ರಯತ್ನ ಮಾಡುತ್ತಿದ್ದರೂ..ಇದೂವರೆಗೂ ಸರ್ಕಾರ ರಚನೆ ಸಂಬಂಧ ಹಕ್ಕು ಮಂಡನೆ ಮಾಡಿಲ್ಲ. ಹೀಗಾಗಿ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದರು.
ಶಿವಸೇನೆ ಜೊತೆ ಸರ್ಕಾರ ರಚಿಸುವ ಸಂಬಂಧ ಕಾಂಗ್ರೆಸ್ ಮತ್ತು ಎನ್​ಸಿಪಿ ನಿರ್ಧಾರ ಅಂತಿಮಗೊಂಡಿಲ್ಲ. ರಾತ್ರಿ 8ಗಂಟೆಯವರೆಗೆ ಅವಕಾಶವಿದ್ದರೂ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಸರಿಯಲ್ಲ ಎಂದು ರಾಷ್ಟ್ರಪತಿ ಆಡಳಿತದ ನಿರ್ಧಾರ ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತರ್ತು ವಿಚಾರಣೆಗೆ ಮನವಿ ಮಾಡಿದೆ.

RELATED ARTICLES

Related Articles

TRENDING ARTICLES