ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು 107 ಕ್ಷೇತ್ರಗಳಲ್ಲಿ ಕಾಂಗ್ರೆಸ್, 81 ಕ್ಷೇತ್ರಗಳಲ್ಲಿ ಬಿಜೆಪಿ, 21 ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು 2 ಕ್ಷೇತ್ರಗಳಲ್ಲಿ ಇತರೆ ಮುನ್ನಡೆ ಸಾಧಿಸಿದ್ದಾರೆ.
ಕನಕಪುರದಲ್ಲಿ ಡಿಕೆಶಿ ಮುನ್ನಡೆ
ರಾಮನಗರ ಜಿಲ್ಲೆ ಕನಕಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಹಿನ್ನೆಡೆ ಸಾಧಿಸಿದ್ದು, 9 ಸಾವಿರ ಮತಗಳ ಅಂತರಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಶಿವಕುಮಾರ್ ಅವರು ಮುನ್ನಡೆಯಲ್ಲಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಫರ್ಧಿಸಿದ್ದ ಸಚಿವ ವಿ. ಸೋಮಣ್ಣ ಹಿನ್ನಡೆ ಅನುಭವಿಸಿದ್ದಾರೆ. ಮತ್ತೊಂದೆಡೆ, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಿ. ಸೋಮಣ್ಣ ಅವರಿಗೆ 4 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಹಿನ್ನಡೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶೆಟ್ಟರ್ ಹಿನ್ನಡೆ ಅನುಭವಿಸಿದ್ದಾರೆ. ಮತ್ತೊಂದೆಡೆ, ಅಥಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಶಾಂತಿನಗರದಲ್ಲಿ ಬದಲಾವಣೆ ಗಾಳಿ?
ಹಾಲಿ ಶಾಸಕ ಹ್ಯಾರಿಸ್ಗೆ ತೀವ್ರ ಹಿನ್ನಡೆ
5ನೇ ಸುತ್ತಿನಲ್ಲೂ ಹ್ಯಾರಿಸ್ ಹಿನ್ನಡೆ
ಬಿಜೆಪಿ ಅಭ್ಯರ್ಥಿ 1,192 ಮತಗಳಿಂದ ಮುನ್ನಡೆ
ಬಿಜೆಪಿಯ ಶಿವಕುಮಾರ್ಗೆ ಮುನ್ನಡೆ
ಬ್ಯಾಟರಾಯನಪುರದಲ್ಲಿ ಕೃಷ್ಣಬೈರೇಗೌಡ ಮುನ್ನಡೆ
ಕೃಷ್ಣಬೈರೇಗೌಡ 3,752 ಮತಗಳಿಂದ ಮುನ್ನಡೆ
ಜಯನಗರದಲ್ಲಿ ಸೌಮ್ಯ ರೆಡ್ಡಿಗೆ ಹಿನ್ನಡೆ
ಬಿಜೆಪಿ ಅಭ್ಯರ್ಥಿ 3,797 ಮತಗಳಿಂದ ಮುನ್ನಡೆ