ಬೆಂಗಳೂರು : ವಸತಿ ಸಚಿವ ವಿ.ಸೋಮಣ್ಣ ಸ್ಫರ್ಧಿಸಿದ್ದ ವರುಣಾ ಹಾಗೂ ಚಾಮರಾಜನಗರ ಎರಡೂ ವಿಧಾನಸಭಾ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಫರ್ಧಿಸಿದ್ದಾರೆ. ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದಿಂದ ಸೋಮಣ್ಣ ಎದುರಾಳಿಯಾಗಿ ಕಣಕ್ಕಿಳಿದಿದ್ದಾರೆ.
ಹಿಂದಿನ ಚುನಾವಣೆಯಲ್ಲಿ ಗೋವಿಂದರಾಜನಗರದಿಂದ ಸ್ಪರ್ಧಿಸಿದ್ದ ವಿ. ಸೋಮಣ್ಣ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ ಹೈಕಮಾಂಡ್ ನಿರ್ಧಾರದಂತೆ ಕ್ಷೇತ್ರವನ್ನು ಬದಲಾಯಿಸಿ ಎರಡು ಕಡೆಗಳಿಂದ ಸ್ಪರ್ಧಿಸಿದ್ದರು.
ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಸೋಮಣ್ಣ
ವರುಣಾದಲ್ಲಿ ಮಾಜಿ ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸಿರುವ ಸಚಿವ ವಿ.ಸೋಮಣ್ಣ ಅವರು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇದೀಗ ಮತ ಎಣಿಕೆ ಕೇಂದ್ರದಿಂದಲೇ ಹೊರ ನಡೆದಿದ್ದಾರೆ.
ಈ ನಡುವೆ, ಸೋಮಣ್ಣ ಅವರು ಚಾಮರಾಜನಗರ ಕ್ಷೇತ್ರದಿಂದಲೂ ಕಣಕ್ಕಿಳಿದಿದ್ದಾರೆ. ಗಮನಾರ್ಹವೆಂದರೆ ಸೋಮಣ್ಣ ಚಾಮರಾಜನಗರದಲ್ಲಿಯೂ ಸುಮಾರು 3 ಸಾವಿರ ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.
ಬಿಜೆಪಿ-71, ಕಾಂಗ್ರೆಸ್-114
224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ-71, ಕಾಂಗ್ರೆಸ್-144, ಜೆಡಿಎಸ್-32, ಕೆಆರ್ಪಿಪಿ 1, ಎನ್ಸಿಪಿ-1, ಎಸ್ಕೆಪಿ-1 ಮತ್ತು ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 223 ಕ್ಷೇತ್ರಗಳಲ್ಲಿಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.