ಬೆಂಗಳೂರು : ಕಾಂಗ್ರೆಸ್ ಪಕ್ಷದ ಈ ಬಾರಿಯ ಗೆಲುವು ಪ್ರಧಾನಿ ನರೇಂದ್ರ ಮೋದಿಯವರ ಸೋಲು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಧಾನಿ ಮೋದಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ರ್ಯಾಲಿಗಳನ್ನು ಮಾಡಿದ್ದರು. ಪ್ರಧಾನಿ ಮೋದಿ ಜನರಿಗೆ ನೀಡಿದ್ದ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ. ಈ ಸೋಲು, ಮೋದಿ, ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಅವರ ಸೋಲು ಎಂದು ತಿಳಿಸಿದ್ದಾರೆ.
ನಮ್ಮ ಗೆಲುವಿಗೆ ರಾಹುಲ್ ಗಾಂಧಿ ಮಾಡಿದ ಭಾರತ್ ಜೋಡೋ ಪಾದಯಾತ್ರೆಯೂ ಬಹಳ ಸಹಕಾರಿಯಾಗಿದೆ. ದೇಶದಲ್ಲಿ ಏಕೈಕ ಜಾತ್ಯಾತೀತ ಪಕ್ಷ ಎಂದರೆ ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಎಲ್ಲಾ ಸಮುದಾಯಗಳ ಮತಗಳೂ ಬಿದ್ದಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ : ಜನತಾ ತೀರ್ಪು ಕಂಡು ‘ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ’
ಕಾಂಗ್ರೆಸ್ ಪಕ್ಷ 130 ಸ್ಥಾನ ಗಳಿಸುತ್ತೆ
ಕಾಂಗ್ರೆಸ್ ಪಕ್ಷ 130 ಸ್ಥಾನ ಗಳಿಸಿದ್ದು, ಈ ಬಗ್ಗೆ ನಾನು ಅಂದಾಜಿಸಿದ್ದೆ. ನಾವು 130ಕ್ಕೂ ಹೆಚ್ಚು ಸ್ಥಾನ ಗಳಿಸುವ ಸಾಧ್ಯತೆ ಇದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಸಂದ ಜಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇತ್ತು. 2018ರಲ್ಲಿ ಬಿಜೆಪಿಗೆ ಬಹುಮತ ಇರಲಿಲ್ಲ. ಆದರೂ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದ್ದರು. ಇದು ಜನರಿಗೆ ಇಷ್ಟವಿರಲಿಲ್ಲ. ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಜನ ನಿರ್ಧರಿಸಿದ್ದರು ಎಂದಿದ್ದಾರೆ.