ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೊತ್ತರಗಳನ್ನು ಕಾಂಗ್ರೆಸ್ ಪಕ್ಷ ಈಡೇರಿಸುವಂತಾಗಲಿ ಎಂದು ಶೂಭ ಕೋರಿದ್ದಾರೆ.
Congratulations to the Congress Party for their victory in the Karnataka Assembly polls. My best wishes to them in fulfilling people’s aspirations.
— Narendra Modi (@narendramodi) May 13, 2023
ಇದನ್ನೂ ಓದಿ : ‘ಕರ್ನಾಟಕದಲ್ಲಿ ದ್ವೇಷದ ಬಾಗಿಲು ಬಂದ್’ ಆಗಿದೆ : ರಾಹುಲ್ ಗಾಂಧಿ
ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ
ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕೆಪಿಸಿಸಿಯ ನೂತನ ಕಚೇರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಸುರ್ಜೆವಾಲ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.
ಕರ್ನಾಟಕದ ಭೂಮಿಪುತ್ರನಿಗೆ ಸಂದ ಗೌರವದ ಗೆಲುವು. pic.twitter.com/thcDe36saf
— Karnataka Congress (@INCKarnataka) May 13, 2023
ಸಿಹಿ ಹಂಚಿ ಸಂಭ್ರಮಿಸಿದ ಖರ್ಗೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಉಸ್ತುವಾರಿ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸಿಹಿ ಹಂಚಿ ಶುಭಾಶಯ ಕೋರಿದ್ದಾರೆ.