Friday, November 22, 2024

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮತ್ತೋರ್ವ ಕೈ ನಾಯಕ

ಮಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೂ ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ್ ​ರೈ(Ramanath Rai) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ (Mangaluru) ಸುದ್ದಿಗಾರರೊಂದಿಗೆ ಮಾತನಾಡಿದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದರು.

ಇನ್ನೂ ರಮಾನಾಥ್ ​ರೈ,ಈ ಬಾರಿಯೂ ಸಹ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದಾರೆ. ಇದುವರೆಗೆ ಸತತ ಒಂಬತ್ತನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು 1985 ರಿಂದ ಇದುವರೆಗೂ ಅವರು ಆರು ಬಾರಿ ಗೆದ್ದಿದ್ದಾರೆ ಮತ್ತು ಈ ಸಲ ಸೇರಿಸಿ ಮೂರು ಬಾರಿ ಸೋತಿದ್ದಾರೆ.

ಹೈಕಮಾಂಡ್​​ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ

ಸೋತರೂ ಪಕ್ಷದ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ‌ ಇರುತ್ತೇನೆ. ನನ್ನ ಸೋಲಿನ ಅವಲೋಕನ ಮಾಡಿದ್ದೇನೆ. ಮುಂದೆ ಹೈಕಮಾಂಡ್​​ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದರು.

71 ವರ್ಷ ವಯಸ್ಸಿನ ರೈ ಈ ಬಾರಿ ತಮ್ಮ ಕೊನೆಯ ಚುನಾವಣೆ ಎದರಿಸಿದ್ದರು. ಆದರೂ ಮತದಾರ ಈ ಬಾರಿಯೂ ಕೈ ಹಿಡಿಯಲಿಲ್ಲ. ಇದರಿಂದ ತೀವ್ರ ಬೇಸರಗೊಂಡ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES