ಬೆಂಗಳೂರು : ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ನ ಸಂವಿಧಾನಪೀಠ ವಜಾಗೊಳಿಸಿದೆ.
ತಮ್ಮ ನಿರ್ಧಾರವು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಂಬಳ ಹಾಗೂ ಗೂಳಿ ಓಟದ ಮೇಲಿನ ಕಾನೂನುಗಳಿಗೆ ಅನ್ವಯಿಸುತ್ತದೆ ಹಾಗೂ ಈ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಪೀಠವು ಹೇಳಿದೆ.
ಇದನ್ನೂ ಓದಿ : ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ : 13 ಬಾಲ್ ನಲ್ಲೇ ಅರ್ಧಶತಕ
ನ್ಯಾ. ಕೆಎಂ ಜೋಸೆಫ್, ನ್ಯಾ. ಅಜಯ್ ರಸ್ತೋಗಿ, ನ್ಯಾ. ಅನಿರುದ್ಧ ಬೋಸ್, ನ್ಯಾ. ಹೃಷಿಕೇಶ್ ರಾಯ್ ಮತ್ತು ನ್ಯಾ. ಸಿಟಿ ರವಿಕುಮಾರ್ಅ ವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ಪ್ರಕಟಿಸಿದೆ. ತಮಿಳುನಾಡಿನಲ್ಲಿ ಗೂಳಿ ಪಳಗಿಸುವ ಕ್ರೀಡೆಗೆ ಅನುಮತಿ ನೀಡಿದ ರಾಜ್ಯ ಕಾನೂನನ್ನು ಪ್ರಶ್ನಿಸಿ ಪ್ರಾಣಿ ಹಕ್ಕುಗಳ ಸಂಸ್ಥೆ ಪೆಟಾ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು.
ಒಟ್ಟಾರೆ, ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆ ಮೂಲಕ ಎರಡು ರಾಜ್ಯಗಳ ಸಾಂಪ್ರದಾಯಿಕ ಕ್ರೀಡೆಗೆ ಕಾನೂನಿನ ಚೌಕಟ್ಟಿನಲ್ಲಿ ಗೆಲುವು ಸಿಕ್ಕಂತಾಗಿದೆ.