Friday, November 22, 2024

ಸಿದ್ದು-ಡಿಕೆಶಿ ಪ್ರಮಾಣವಚನ ಸಮಾರಂಭಕ್ಕೆ ವರುಣನ ಕಾಟ?

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪಟ್ಟಕ್ಕೇರುತ್ತಿರುವ ಸಿದ್ದರಾಮಯ್ಯ ಅವರ ನಾಳೆಯ ಪ್ರಮಾಣಚವನ ಸಮಾರಂಭಕ್ಕೆ ವರುಣನ ಕಾಟ ಎದುರಾಗುವ ಸಾಧ್ಯತೆಯಿದೆ.

ಹೌದು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಕೊನೆಯ ಹಂತದ ಸಿದ್ಧತೆ ನಡೆಯುತ್ತಿದೆ.

ಈ ನಡುವೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದ್ದು, ಸಮಾರಂಭಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ನಾಳೆಯಿಂದ ಮುಂದಿನ 5 ದಿನ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಇನ್ನು ವೇದಿಕೆ ಮುಂಭಾಗ ಗಣ್ಯರು, ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, 1 ಲಕ್ಷ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ : ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೇಗಿದೆ ತಯಾರಿ?

ಭಾರೀ ಮಳೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಗುಡ್ ನ್ಯೂಸ್ ನೀಡಿದೆ.

ಮೇ 21, 22ರಂದು ದಕ್ಷಿಣ ಒಳನಾಡು, ಮೇ 22ರಂದು ಕರಾವಳಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹೇಳಿದೆ. ಇನ್ನು, ಈ ವಾರಾಂತ್ಯದಲ್ಲಿ ರಾಜಧಾನಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.

RELATED ARTICLES

Related Articles

TRENDING ARTICLES