ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ (Siddaramaiah) ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಮೇ 20) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೌದು, ಇಂದು ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಪದಗ್ರಹಣ ಸಮಾರಂಭ ನಡೆಯಲಿದ್ದು, ಸಿದ್ದರಾಮಯ್ಯ,ಡಿಕೆಸಿವಕುಮಾರ್ ಜೊತೆ 8 ಶಾಸಕರು ಪ್ರಮಾಣವಚನ ಸ್ಚೀಕರಿದ್ದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawar Chand Gehlot) ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿಕೆಶಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಲಲು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇವರನ್ನು ಡಿಕೆಶಿ ಸ್ವಾಗತಿಸಿದರು.