ಬೆಂಗಳೂರು: ರಾಜ್ಯದ ಸಚಿವರಾಗಿ ಇಂದು ಜಮೀರ್ ಅಹ್ಮದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಇಂಗ್ಲೀಷ್ನಲ್ಲಿ ಜಮೀರ್ ಅಹ್ಮದ್ ಅವರು ಅಲ್ಲಾಹ್ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಹೌದು, ಕಂಠೀರವ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು. ಇವರೆಲ್ಲರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಭಾರತೀಯ ಸಂವಿಧಾನದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಹಿಡಿಯುತ್ತೇನೆಂದು, ಸಚಿವನಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನಿರ್ವಹಿಸುತ್ತೇನೆಂದು ದೇವರ ಮತ್ತು ನನ್ನ ತಾಯಿಯ ಹೆಸರಿನಲ್ಲಿ ಪ್ರಮಾಣ ಮಾಡಿದ್ದೇನೆ. pic.twitter.com/mr0CDtZIDp
— B Z Zameer Ahmed Khan (@BZZameerAhmedK) May 20, 2023
ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನು ಡಿಕೆಶಿಯವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕನ್ನಡ ಕಲಿಯದಿರುವುದು ನಾಚಿಕೆಗೇಡು
ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು. ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ?
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) May 20, 2023
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ? ಎಂದು ಪ್ರಶ್ನೆ ಮಾಡಿದ್ದಾರೆ.