ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಶನಿವಾರ ಸಂಜೆ ಜೋರು ಮಳೆಯಾಗಿದೆ. ಕೂಲ್ ಕೂಲ್ ವಾತಾವರಣ ಸೃಷ್ಟಿಯಾಗಿದೆ.
ನಗದರಲ್ಲಿ ವರುಣನ ಆರ್ಭಟ ಹಿನ್ನೆಲೆ ಮೆಜೆಸ್ಟಿಕ್ ಬಸ್ ನಿಲ್ದಾಣ ಕೆರೆಯಂತಾಗಿದೆ. ಕಾರ್ಪೋರೇಷನ್ ಬಳಿ ಬಿಎಂಟಿಸಿ ಬಸ್ ಮೇಲೆ ಮರ ಉರುಳಿ ಬಿದ್ದಿದೆ. ಇನ್ನೂ ಕೆಲವಡೆ ಬಿರುಗಾಳಿ, ಗುಡುಗು ಹಾಗೂ ಮಿಂಚು ಸಹಿತ ಮಳೆ ಸುರಿದಿದೆ.
ಬೆಂಗಳೂರು ನಗರ ವ್ಯಾಪ್ತಿಯ ಜಯನಗರ, ಜೆ.ಪಿ ನಗರ, ಬನಶಂಕರಿ, ಶಾಂತಿನಗರ, ಚಾಮರಾಜಪೇಟೆ, ರಾಜಾಜಿನಗರ, ಚಂದ್ರಲೇಔಟ್, ಮೆಜೆಸ್ಟಿಕ್, ಸಿಟಿ ಮಾರ್ಕೇಟ್, ರಿಚ್ಮಂಡ್ ರಸ್ತೆ, ನಂಜಪ್ಪ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಬೇಸಗೆಯ ಬೇಗೆಯಿಂದ ಬಳಲಿದ್ದ ರಾಜಧಾನಿ ಮಂದಿಗೆ ವರುಣನ ಆಗಮನ ಸ್ವಲ್ಪ ತಂಪೆರೆದಂತಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
🌧️⛈️😍
Cool weather ☁️#bangalorerains pic.twitter.com/YZcu33pBzs
— 💫RRReddy❤️🔥ᴳᵃᵐᵉ ᶜʰᵃⁿᵍᵉᴿ ♔ (@RamRohitReddy) May 20, 2023
ಇದನ್ನೂ ಓದಿ : ರಾಜ್ಯದಲ್ಲಿ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಐದು ದಿನ ಭಾರೀ ಮಳೆ ಸಾಧ್ಯತೆ
ರಾಜ್ಯದ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಹೆಚ್ಚನ ಮಳೆ ಸುರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.