Wednesday, October 30, 2024

ಕರುನಾಡಲ್ಲಿ ‘ಶಾಂತಿ, ಸಾಮರಸ್ಯ, ಪ್ರಗತಿ’ ಸಾಧಿಸಲು ಕಾಂಗ್ರೆಸ್ ಬದ್ಧ : ಸೋನಿಯಾ ಗಾಂಧಿ

ಬೆಂಗಳೂರು : ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಮೊದಲ ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಈ ಬಗ್ಗೆ ವಿಡಿಯೋ ಸಂದೇಶದ ಮೂಲಕ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಬಹುಮತ ನೀಡಿರುವ ಕರ್ನಾಟಕ ರಾಜ್ಯದ ಜನತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಜನಪರ ಸರ್ಕಾರಕ್ಕಾಗಿ, ಈ ಬಹುಮತ ಬಡವರ ಪರವಾದ ಸರ್ಕಾರಕ್ಕಾಗಿ ಈ ಬಹುಮತ. ಇದು ವಿಭಜನೆ ರಾಜಕೀಯ ಹಾಗೂ ಭ್ರಷ್ಟಾಚಾರವನ್ನು ತಿರಸ್ಕರಿಸುವ ಜನಾದೇಶ ಎಂದು ಬಣ್ಣಿಸಿದರು.

ಇದನ್ನೂ ಓದಿ : ಭಾರತ್ ಜೋಡೋದಿಂದ ‘ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ’ : ರಾಹುಲ್ ಗಾಂಧಿ

ಇಂದು ರಚನೆಯಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ. ಈ ಸರ್ಕಾರ ಮೊದಲ ಸಚಿವ ಸಂಪುಟದಲ್ಲಿ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜನ ಭ್ರಷ್ಟಾಚಾರ, ದ್ವೇಷವನ್ನು ಮಣಿಸಿದ್ದಾರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ‘ನಮ್ಮ ಬಳಿ ಸತ್ಯ ಹಾಗೂ ಬಡ ಜನರಿದ್ದರು. ಬಿಜೆಪಿ ಬಳಿ ಹಣ, ಅಧಿಕಾರ, ಪೊಲೀಸ್ ಅಧಿಕಾರಿಗಳು ಎಲ್ಲವೂ ಇತ್ತು. ಅವರ ಈ ಎಲ್ಲಾ ಶಕ್ತಿಗಳನ್ನು ಕರ್ನಾಟಕದ ಜನ ಮಣಿಸಿದ್ದಾರೆ. ಜನ ಅವರ ಭ್ರಷ್ಟಾಚಾರ, ದ್ವೇಷವನ್ನು ಮಣಿಸಿದ್ದೀರಾ. ಈ ಚುನಾವಣೆಯಲ್ಲಿ ರಾಜ್ಯದ ಜನ ದ್ವೇಷವನ್ನು ಒಡೆದೋಡಿಸಿ ಪ್ರೀತಿ ಸಾಮರಸ್ಯಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ದ್ವೇಷದ ಮಾರುಕಟ್ಟೆಯಲ್ಲಿ ಕರ್ನಾಟಕದ ಜನ ಪ್ರೀತಿ ಸಾಮರಸ್ಯದ ಅಂಗಡಿ ತೆರೆದಿದ್ದಾರೆ’ ಎಂದು ಹೇಳಿದರು.

RELATED ARTICLES

Related Articles

TRENDING ARTICLES