Monday, November 25, 2024

ಇದು ‘ಬಿಬಿಎಂಪಿ ನಿರ್ಲಕ್ಷ್ಯದ ಪರಮಾವಧಿ’ : ಹೆಚ್.ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು : ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ಯುವತಿ ಸಾವನ್ನಪ್ಪಿರುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಹೇಳೀದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ, ಧರೆಗೆ ಉರುಳಿದ ಮರಗಳು

ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಬೇಕು. ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES