Wednesday, May 22, 2024

ನನಗೆ ‘ಝೀರೋ ಟ್ರಾಫಿಕ್ ಸೌಲಭ್ಯ’ ಬೇಡ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆ ತಮಗೆ ನೀಡಿದ್ದ ಝೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

ಝೀರೋ ಟ್ರಾಫಿಕ್ ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಿರೋ ಟ್ರಾಫಿಕ್ ಬೇಡ ಅಂದಿದ್ದೇಕೆ?

ಇಂದು ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಯಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ.

ಮೊದಲು ಕೆ.ಆರ್‌ ಸರ್ಕಲ್‌ ಅಂಡರ್‌ಪಾಸ್‌ ಸ್ಥಳ ವೀಕ್ಷಣೆ ನಡೆಸಿದ ಸಿದ್ದರಾಮಯ್ಯ ನಂತರ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಸಿಟಿ ರೌಂಡ್ಸ್‌ ಹಾಕಲು ಸಿಎಂ ಮುಂದಾಗಿದ್ದರು. ಈ ವೇಳೆ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದ್ದರಿಂದ ಸಿಟಿ ರೌಂಡ್ಸ್‌ ಮೊಟಕುಗೊಳಿಸಿದರು. ಈ ಕಾರಣದಿಂದ ಝೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES