Friday, November 22, 2024

ಮಳೆಹಾನಿ : ಬಿಬಿಎಂಪಿಗೆ ಸುಮಾರು 70ಕ್ಕೂ ಹೆಚ್ಚು ದೂರು

ಬೆಂಗಳೂರು : ಮಳೆಹಾನಿ ಸಂಬಂಧಿಸಿದಂತೆ ಸಹಾಯ ತಂತ್ರಾಂಶದ ಮೂಲಕ ಬಿಬಿಎಂಪಿಗೆ ಸುಮಾರು 70 ದೂರುಗಳು ಬಂದಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಖುದ್ದಾಗಿ ಭೇಟಿ ನೀಡಿದ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಪಡೆದರು.

ದೂರುಗಳ ಮಾಹಿತಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ದೂರುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಪಾಲಿಕೆ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ 6ನೇ ಮಹಡಿಯಲ್ಲಿರುವ ಕಮ್ಯಾಂಡ್ ಕಂಟ್ರೋಲ್ ಸೆಂಟರ್ ಗೆ ಭೇಟಿ ನೀಡಿ ಸಹಾಯ ತಂತ್ರಾಂಶದ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಿದರು.

ಇದನ್ನೂ ಓದಿ : ಬೆಂಗಳೂರಲ್ಲಿ ‘ರಕ್ಕಸ ಮಳೆಗೆ ಮೊದಲ ಬಲಿ’, ಅಸ್ವಸ್ಥಗೊಂಡ ಯುವತಿ ಸಾವು

ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ

ಈ ಪೈಕಿ ಸಹಾಯ ತಂತ್ರಾಂಶದಲ್ಲಿ ಸುಮಾರು 70 ದೂರುಗಳು ಬಂದಿದ್ದು, ಮೂರು ದಿನಗಳೊಳಗಾಗಿ ಬಂದಿರುವಂತಹ ದೂರುಗಳನ್ನು ಪರಿಹರಿಸಲು ಸೂಚಿಸಿದರು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸಬೇಕು ಎಂದು ತುಷಾರ್ ಗಿರಿ ನಾಥ್ ತಾಕೀತು ಮಾಡಿದರು.

ಇದಲ್ಲದೆ, ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಿಸಲು ಸೂಚಿಸಿದರು. ಮಳೆ ಹಾನಿ ಸಂಬಂಧ ದೂರಿನ ಮಾಹಿತಿ ಹಾಗೂ ತೆಗೆದುಕೊಂಡಿರುವ ಮಾಹಿತಿಯನ್ನು ತಮ್ಮ ಗಮನಕ್ಕೆ ತರಲು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತ (ಮಾಹಿತಿ ತಂತ್ರಜ್ಞಾನ) ಉಜ್ವಲ್ ಕುಮಾರ್ ಗೋಷ್ ಹಾಗೂ ಬಿಬಿಎಂಪಿ ಉಪ ಆಯುಕ್ತ ( ಅಡಳಿತ) ಮಂಜುನಾಥ ಸ್ವಾಮಿ ಬಿ.ಎಸ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES