Friday, November 22, 2024

ಘಟಾನುಘಟಿಗಳಿಗೆ ‘ಕೈ’ ತಪ್ಪಿದ ಮಂತ್ರಿಗಿರಿ : ಇವರೇ ನೂತನ ಸಚಿವರು

ಬೆಂಗಳೂರು : ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಘಟಾನುಘಟಿ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಭಾರೀ ನಿರಾಸೆ ಉಂಟಾಗಿದೆ.

ಮಹತ್ವದ ಬೆಳವಣಿಗೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಆರ್‌.ವಿ ದೇಶಪಾಂಡೆ, ಬಿ.ಕೆ ಹರಿಪ್ರಸಾದ್ ಸೇರಿದಂತೆ ಹಲವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಮಾಜಿ ಸಚಿವ ಟಿ.ಬಿ ಜಯಚಂದ್ರ, ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿಗೂ ಮಂತ್ರಿಗಿರಿ ಮಿಸ್ ಆಗಿದೆ.

ಬ್ರಾಹ್ಮಣ ಕೋಟಾದಡಿ ದಿನೇಶ್ ಗುಂಡೂರಾವ್ ಹಾಗೂ ಆರ್.ವಿ ದೇಶಪಾಂಡೆ ಮಧ್ಯೆ ಪೈಪೋಟಿ ನಡೆದಿತ್ತು. ಸಚಿವ ಸ್ಥಾನ ಕೈತಪ್ಪುವ ಭೀತಿಯಲ್ಲಿದ್ದ ದಿನೇಶ್ ಗುಂಡೂರಾವ್ ಅಂತಿಮ ಕ್ಷಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಕನಿಷ್ಠ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು : ಬಸವಜಯ ಮೃತ್ಯುಂಜಯ ಸ್ವಾಮೀಜಿ

ಇವರೇ ನೂತನ ಸಚಿವರು

ನಾಳೆ 23 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ 1 ಸ್ಥಾನವನ್ನು ಬಾಕಿ ಉಳಿಸಿಕೊಂಡಿದೆ. ಈಗಾಗಲೇ 23 ಶಾಸಕರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ನೀಡಲಾಗಿದೆ.

ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಹೆಚ್.ಕೆ ಪಾಟೀಲ್, ಸಂತೋಷ್ ಲಾಡ್, ಬೈರತಿ ಸುರೇಶ್,  ಡಿ. ಸುಧಾಕರ್, ಈಶ್ವರ ಖಂಡ್ರೆ, ಚಲುವರಾಯಸ್ವಾಮಿ, ಕೆ. ವೆಂಕಟೇಶ್, ಬೋಸರಾಜು, ಮಧು ಬಂಗಾರಪ್ಪ, ತಂಗಡಗಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿಗಿರಿ ಪಕ್ಕಾ ಆಗಿದೆ. ಇನ್ನೇನು ಕೆಲವೇ ಕ್ಷಣದಲ್ಲಿ ಎಐಸಿಸಿಯಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ.

RELATED ARTICLES

Related Articles

TRENDING ARTICLES