ಬೆಂಗಳೂರು : ರಾಯಚೂರಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಿ ಎಂದು ಅಧಿಕಾರಿಗಲಿಗೆ ತಾಕೀತು ಮಾಡಿದ್ದಾರೆ.
ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರಿಗೆ ಸೂಕ್ತ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಪಂ ಸಿಇಓಗೆ ಆದೇಶಿಸಿದ್ದಾರೆ.
ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಘಟನೆ ಸಂಬಂಧ ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.
ಇದನ್ನೂ ಓದಿ : ಈಗ ‘ನಾಲ್ಕುವರೆ ವರ್ಷ ಗೇಮ್’ ನಮ್ಮದು.. ನಾವು ಆಡ್ತೀವಿ : ಡಿ.ಸಿ ಗೌರಿಶಂಕರ್ ಟಕ್ಕರ್
ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು. ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು. ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು. ಅಗತ್ಯ ಕ್ರಮಗಳನ್ನು ಕೈಗೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ರಾಯಚೂರು ಜಿಲ್ಲೆಯ ಗೊರೆಬಾಳ ಗ್ರಾಮದ ಗ್ರಾಮಸ್ಥರು ಕಲುಷಿತ ನೀರು ಕುಡಿದು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗೆ ಮುಖ್ಯಮಂತ್ರಿ @siddaramaiah ಅವರು ನೀಡಿರುವ ಆದೇಶದ ವಿವರ. pic.twitter.com/MgPIQtsGMD
— CM of Karnataka (@CMofKarnataka) May 28, 2023
ವಿಶೇಷ ತುರ್ತು ಚಿಕಿತ್ಸಾ ಘಟಕ ಸ್ಥಾಪನೆ
ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರಿಗೆ ಎರಡು ದಿನದಿಂದ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹಲವರು ಅಸ್ವಸ್ಥರಾಗಿದ್ದರು. ಆರೋಗ್ಯ ಪರೀಕ್ಷೆಗಾಗಿ ವೈದ್ಯರ ತಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ತುರ್ತು ಚಿಕಿತ್ಸಾ ಘಟಕ ಸ್ಥಾಪಿಸಿ, ಎರಡು ದಿನದಿಂದ ಅಲ್ಲಿಯೇ ಬೀಡು ಬಿಟ್ಟಿದೆ.