ಬೆಂಗಳೂರು: ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಮುಕ್ತ ಪ್ರವೇಶದ ಅವಕಾಶವನ್ನು ಕಲ್ಪಿಸಿದ್ದಾರೆ.
ಹೌದು, ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿಎಂ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸರ್ಕಾರಿ ನಿವಾಸಕ್ಕೆ ಮುಕ್ತ ಪ್ರವೇಶದ ಅವಕಾಶವನ್ನು ಕಲ್ಪಿಸಿದ್ದಾರೆ. ವರುಣಾದಿಂದ ಬಂದ ಮತದಾರರು ತಮ್ಮ ವರುಣಾ ಕ್ಷೇತ್ರದ ವಿಳಾಸ ತೋರಿಸಿ ಒಳಗೆ ಹೋಗಲು ಅವಕಾಶ ಕೂಡ ನೀಡಲಾಗಿದೆ.
ಇದನ್ನೂ ಓದಿ: ಕೆಲ ಸಚಿವರು, ಶಾಸಕರನ್ನು ‘ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ’ : ಹೆಚ್.ಡಿ ಕುಮಾರಸ್ವಾಮಿ
ಇನ್ನೂ ಪೊಲೀಸರು ಆಧಾರ್, ID ಚೆಕ್ ಮಾಡಿ ವರುಣಾ ಕ್ಷೇತ್ರದ ಜನರಿಗೆ ಸಿಎಂ ಭೇಟಿ ಮಾಡಲು ಬಿಡುತ್ತಾರೆ. ಸಿಎಂ ಸಿದ್ದರಾಮಯ್ಯ ಈ ಮೂಲಕ ತಮ್ಮ ಕ್ಷೇತ್ರದ ಮತದಾರರಿಗೆ ಮುಕ್ತ ಅವಕಾಶ ಕಲ್ಪಿಸಿ ಸಮಸ್ಯೆ ಆಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.