Friday, November 22, 2024

5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡೇ ಮಾಡುತ್ತೇವೆ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ನಾವು ನೀಡಿದ 5 ಗ್ಯಾರಂಟಿಗಳನ್ನೂ ಜಾರಿ ಮಾಡೋದು ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹೌದು, ಗ್ಯಾರಂಟಿ ಜಾರಿ ಮಾಡುತ್ತವೆ ಆದರೆ ಗ್ಯಾರಂಟಿ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಇಂದಿನ ಸಭೆಯಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕ್ಯಾಬಿನೆಟ್​ ಸಭೆಯನ್ನೂ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದ್ದು, ಈ ಮೊದಲು ಸಚಿವರ ಜತೆ ಸಿದ್ಧರಾಮಯ್ಯ ಸಭೆ ಮಾಡಿದ್ದು, ಸಿಎಂಗೆ ಸಚಿವರ ಪರಮಾಧಿಕಾರವೂ ಸಿಕ್ಕಿದೆ. ಆದರೆ ಗ್ಯಾರಂಟಿ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಎರಡು ಕಡೆ ಸಿಟಿಜನ್ ಶಿಪ್ ಇದೆ, ಮುಟ್ಟುಗೋಲು ಹಾಕಿಕೊಂಡು ಗಡಿಪಾರು ಮಾಡಬೇಕು

ಇನ್ನೂ ಸಚಿವರ ಜತೆಗಿನ ಸಿಎಂ ಸಭೆಯಲ್ಲಿ ಹಣಕಾಸು ಇಲಾಖೆ ವಿರೋಧಿಸಿದ್ದು, ಗ್ಯಾರಂಟಿ ಜಾರಿ‌ಗೆ ಅನುದಾನ ಹೊಂದಿಸುವುದು ಸದ್ಯಕ್ಕೆ ಕಷ್ಟ ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಆದರೆ ಗ್ಯಾರಂಟಿ ಜಾರಿ ಮಾಡಲು ಸಭೆಯಲ್ಲಿ ಸಚಿವರು ಮಾತ್ರ ಪಟ್ಟು ಹಿಡಿದಿದ್ದು, ಹಣಕಾಸು ಇಲಾಖೆ ಅಧಿಕಾರಿಗಳು 1 ದಿನ ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದ್ದರು.

ರಾಜ್ಯ ಸರ್ಕಾರದಿಂದ 5 ಗ್ಯಾರಂಟಿಗಳ ಜಾರಿ ವಿಚಾರವಾಗಿ ಗೊಂದಲಕಾರಿ ಹೇಳಿಕೆ ನೀಡದಂತೆ ಸಭೆಯಲ್ಲಿ ಸಚಿವರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES