ಬೆಂಗಳೂರು : ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ಪಕ್ಷವನ್ನು ವಿಸರ್ಜನೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ, ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದು ಟಾಂಗ್ ಕೊಟ್ಟಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಯಾವಾಗ ವಿಸರ್ಜನೆ ಮಾಡ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಅಂತಾ ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದಿದ್ದಾರೆ.
ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ.6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
ನಾನು ಸೋತ ನೋವಿನಲ್ಲಿದ್ದೇನೆ
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಬಿಜೆಪಿಯವ್ರು 15 ಲಕ್ಷ ಅಕೌಂಟ್ಗೆ ಹಾಕ್ತೀವಿ ಅಂದಿದ್ರು ಈ ಬಗ್ಗೆ ಕುಮಾರಣ್ಣ ಮಾತಾಡ್ತಿಲ್ಲ : DKS
ನನಗೆ 123 ಸ್ಥಾನಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ. ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ನಿಜ ಎಂದು ಉಲ್ಲೇಖಿಸಿದ್ದಾರೆ.
ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು.4/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ
ಈಗ ಚುನಾವಣಾ ಫಲಿತಾಂಶ ಬಂದಿದೆ. ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ ಎಂದು ಛೇಡಿಸಿದ್ದಾರೆ.
ಕನ್ನಡ ಓದೋಕೆ ಬಾರದಿದ್ರೆ ನನ್ನ ಬಳಿ ಬರಲಿ
ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ. 3/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023