Sunday, November 3, 2024

CM ಆಪ್ತ ಸಲಹೆಗಾರರಾಗಿ ಸುನೀಲ್ ಕನುಗೋಲು​​​ ನೇಮಕ

ಬೆಂಗಳೂರು:  ಕಾಂಗ್ರೆಸ್‌ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್‌ ಕನುಗೋಲು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಹೌದು, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಕೈಗೊಂಡಿದ್ದ ಪೇಸಿಎಂ, ಸೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನೀಲ್ ಕನ್ನುಗೋಲು ಎನ್ನಲಾಗಿದೆ. ಇವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ತಕ್ಷಣದಿಂದಲೇ ಸುನೀಲ್ ಕನ್ನುಗೋಲು ಅವರ ನೇಮಕದ ಆದೇಶ ಜಾರಿಗೆ ಬರಲಿದೆ.

ಯಾರು ಈ ಸುನೀಲ್ ಕನಗೋಲು..?

ಭಾರತದ ಮುಂಚೂಣಿ ರಾಜಕೀಯ ತಂತ್ರಗಾರರ ಪೈಕಿ ಒಬ್ಬರಾಗಿರುವ ಸುನಿಲ್‌ ಕನಗೋಲು ಕರ್ನಾಟಕದ ಬಳ್ಳಾರಿ ಮೂಲದವರಾಗಿದ್ದು, ಅಮೇರಿಕಾದಲ್ಲಿ ಉನ್ನತ ಶಿಕ್ಷಣ ಪೂರೈಸಿದ ಬಳಿಕ ಗುಜರಾತ್‌ ಚುನಾವಣೆಯಲ್ಲಿ ರಾಜಕೀಯ ತಂತ್ರಗಾರರಾಗಿ ಕರ್ತವ್ಯ ನಿರ್ವಹಿಸಿದ್ದವರು. 2014 ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ತಂತ್ರಗಾರಿಕಾ ತಂಡದಲ್ಲಿ ಮಹತ್ವದ ಜವಾಬ್ದಾರಿ ಹೊತ್ತಿದ್ದ ಸುನಿಲ್‌ ಕನಗೋಲು, 2017 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್‌ ಅವರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ: ಶೆಟ್ಟರ್, ಸವದಿ, ಗುಬ್ಬಿ ಶ್ರೀನಿವಾಸರಿಂದ ನಮಗೆ ಶಕ್ತಿ ಬಂದಿದೆ : ಡಿ.ಕೆ ಶಿವಕುಮಾರ್

2019 ರ ಲೋಕಸಭಾ ಚುನಾವಣೆ ವೇಳೆ ತಮಿಳುನಾಡಿನ ಎಂ. ಕೆ ಸ್ಟಾಲಿನ್‌ ಅವರ ರಾಜಕೀಯ ತಂತ್ರಗಾರರಾಗಿದ್ದ ವೇಳೆ ಅವರು ನಡೆಸಿದ್ದ ʻನಮಕ್ಕು ನಾಮೆʼ ಎಂಬ ಹೆಸರಿನ ಪ್ರಚಾರ ಆಂದೋಲನ ಅವರಿಗೆ ದೊಡ್ಡ ಮಟ್ಟದ ಯಶಸ್ಸು ತಂದು ಕೊಟ್ಟಿತ್ತು.

ಕೆಲವೊಂದಷ್ಟು ಆಂತರಿಕ ಕಾರಣಗಳಿಂದಾಗಿ ಬಿಜೆಪಿ ತೊರೆದು ಕಾಂಗ್ರೆಸ್​ನೊಂದಿಗೆ ಕೈಜೋಡಿಸಿದ್ದ ಕನಗೋಲು ಅವರಿಂದಾಗಿ ಕಾಂಗ್ರೆಸ್‌ ಭರಪೂರ ಲಾಭ ಪಡೆದುಕೊಂಡಿತು.

ಸುನೀಲ್ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ತೆರೆ ಹಿಂದಿನ ತಂತ್ರಗಾರಿಕೆಯನ್ನು ಹೆಣೆದಿದ್ದರು. ಈಗ ಆಡಳಿತದಲ್ಲೂ ಸಿಎಂಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.

 

RELATED ARTICLES

Related Articles

TRENDING ARTICLES