ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳು ಹಾಗೂ ಕಾನೂನು ಸಲಹೆಗಾರರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ.ಗೋವಿಂದರಾಜ್, ನಜೀರ್ ಅಹ್ಮದ್ ನೇಮಕವಾಗಿದ್ದಾರೆ. ಇನ್ನೂ ವಿರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಎ.ಎಸ್ ಪೊನ್ನಣ್ಣ ಅವರನ್ನು ಸಿಎಂ ಕಾನೂನು ಸಲಹೆಕಾರರಾಗಿ ನೇಮಕ ಮಾಡಲಾಗಿದೆ.
ಕೆ. ಗೋವಿಂದರಾಜ್ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಇವರು ಹಾಗೂ ನಜೀರ್ ಅಹ್ಮದ್ ಅವರನ್ನು ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇವರಿಗೆ ಸಂಪುಟ ದರ್ಜೆ ಸ್ಥಾನಮಾನಗಳನ್ನು ನೀಡಲಾಗಿದೆ.
ಇದನ್ನೂ ಓದಿ : ‘ಸಿದ್ದು-ಡಿಕೆಶಿ ಜಾತಿ ಪ್ರೇಮ’ ನೋಡಿ ಈಡಿಗ ಮುಖಂಡರು ಕಲಿಯಬೇಕು : ಪ್ರಣವಾನಂದ ಸ್ವಾಮೀಜಿ
ಸುನೀಲ್ ಕನುಗೋಲು ಮುಖ್ಯ ಸಲಹೆಗಾರ
ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ನೇಮಕ ಮಾಡಲಾಗಿದೆ. ಚುನಾವಣಾ ನೀತಿ ತಂತ್ರಜ್ಞ ಸುನೀಲ್ ಕನುಗೋಲು ಅವರು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.
ತಿಮ್ಮಕ್ಕಗೆ ಸಂಪುಟ ದರ್ಜೆ ಸ್ಥಾನಮಾನ
ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರಿಸಲಾಗಿದೆ. ಜೊತೆಗೆ, ಪರಿಸರ ರಾಯಭಾರಿಯಾಗಿ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.