Friday, November 22, 2024

ಗೋವುಗಳನ್ನು ಏಕೆ ಕಡಿಯಬಾರದು? : ಸಚಿವರ ಹೇಳಿಕೆಗೆ ಬೊಮ್ಮಾಯಿ ಕಿಡಿ

ಬೆಂಗಳೂರು : ಗೋವುಗಳನ್ನು ಏಕೆ ಕಡಿಯಬಾರದು? ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ? ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ? ಅಥವಾ ಹೈ ಕಮಾಂಡ್ ಮೆಚ್ಚಿಸಲೊ? ಎಂದು ಪ್ರಶ್ನೆ ಮಾಡಿದ್ದಾರೆ.

ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದೆ. ಅವರ ಹೇಳಿಕೆ ಖಂಡನೀಯ. ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ ಎಂದು ಛೇಡಿಸಿದ್ದಾರೆ.

ಗೋಹತ್ಯೆ ನಿಷೇಧ ಪ್ರತಿಪಾದಿಸಿದ್ದು ಗಾಂಧಿ

ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಹಿಟ್ಲರ್ ಸರ್ಕಾರ ಜಾರಿಗೆ ಬಂದಿದೆ : ಚಕ್ರವರ್ತಿ ಸೂಲಿಬೆಲೆ

ನಾವು ಕಾನೂನಿಗೆ ಬಲ ತುಂಬಿದ್ದೇವೆ‌

ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ.  ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಸಿವರಿಗೆ ಬುದ್ಧಿ ಹೇಳಲಿ

ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ ಎಂದು ನಯವಾಗಿಯೇ ಸಿದ್ದರಾಮಯ್ಯಗೆ ಬುದ್ಧಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES