Tuesday, November 5, 2024

ಒಡಿಶಾ ರೈಲು ದುರಂತ : ಅನಾಥ ಮಕ್ಕಳ ಶಿಕ್ಷಣದ ಹೊಣೆ ಹೊತ್ತ ಗೌತಮ್ ಅದಾನಿ

ಬೆಂಗಳೂರು : ಒಡಿಶಾ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ವಹಿಸಿಕೊಳ್ಳಲಿದೆ ಎಂದು ಕೈಗಾರಿಕೋದ್ಯಮಿ ಗೌತಮ್ ಅದಾನಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಗೌತಮ್ ಅದಾನಿ ಅವರು, ಒಡಿಶಾದಲ್ಲಿ ಸಂಭವಿಸಿರುವ ರೈಲು ದುರಂತದ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದಾರೆ ಹಾಗೂ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಸಂತ್ರಸ್ತರು ಹಾಗೂ ಮತ್ತು ಅವರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ. ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ. ಹೀಗಾಗಿ, ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಒಡಿಶಾ ರೈಲು ದುರಂತ : ವಿರಾಟ್ ಕೊಹ್ಲಿ, ಯುವಿ, ಗಂಭೀರ್ ವಿಷಾಧ

ಇನ್ನೂ 100 ಮಂದಿ ಸ್ಥಿತಿ ಗಂಭೀರ

ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಅವರು ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ್ದಾರೆ. ರೈಲು ಅಪಘಾತದಲ್ಲಿ 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇನ್ನೂ 100ಕ್ಕೂ ಹೆಚ್ಚು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ದೆಹಲಿ ಏಮ್ಸ್ ಮತ್ತು ಆರ್‌ಎಂಎಲ್ ಆಸ್ಪತ್ರೆಯಿಂದ ಬಂದಿರುವ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮಾಂಡವೀಯ ತಿಳಿಸಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದ್ದು, 300ರ ಸಮೀಪಕ್ಕೆ ತಲುಪಿದೆ.

RELATED ARTICLES

Related Articles

TRENDING ARTICLES