ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡಿದ್ದ ಅರ್ಜುನ್ ಸರ್ಜಾ ವಿರುದ್ಧದ ಮೀ ಟೂ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಟಿ ಶ್ರುತಿ ಹರಿಹರನ್ಗೆ ನೋಟಿಸ್ ಜಾರಿ ಮಾಡಲಾಗಿದೆ.
ಬಹುಭಾಷಾ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧದ ನಟಿ ಶೃತಿ ಹರಿಹರನ್ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಸಿಕ್ಕಿಲ್ಲ. ಹೀಗಾಗಿ, ಸಿಆರ್ಪಿಸಿ ನಿಯಮಾನುಸಾರ ಫಾರ್ಮ್ ನಂಬರ್ 159ರ ಅಡಿಯಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಇದಲ್ಲದೆ, ಬಿ ರಿಪೋರ್ಟ್ ಸಿದ್ಧತೆಗೂ ಕೂಡ ಕಬ್ಬನ್ ಪಾರ್ಕ್ ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಕಬ್ಬನ್ ಪಾರ್ಕ್ ಪೊಲೀಸರು ಬಿ ರಿಪೋರ್ಟ್ ಸಿದ್ಧಪಡಿಸಲು ನಿರ್ಧಾರ ಮಾಡಿದ್ದು, ಹೀಗಾಗಿ ಶ್ರುತಿ ಹರಿಹರನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಇದನ್ನೂ ಒದಿ : ಸಿಎಂ ಕುಮಾರಸ್ವಾಮಿಗೂ ಮೀ ಟೂ ಕಂಟಕ?
ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ
ನಟಿ ಶ್ರುತಿ ಹರಿಹರನ್ ಅವರು, ವಿಸ್ಮಯ ಸಿನಿಮಾ ಚಿತ್ರೀಕರಣ ವೇಳೆ ಲೈಂಗಿಕ ಕಿರುಕುಳ ಆಗಿತ್ತು ಎಂದು ನಟ ಅರ್ಜುನ್ ಸರ್ಜಾ ವಿರುದ್ಧ ಆರೋಪಿಸಿದ್ದರು. ಈ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ಗಂಡ ಮತ್ತು ಹೆಂಡತಿ ಪಾತ್ರದಲ್ಲಿ ಬಣ್ಣ ಹಚ್ಚಿದ್ದರು. ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದರು ಅಂತಾ ಶ್ರುತಿ ಹರಿಹರನ್ ಆರೋಪ ಮಾಡಿದ್ದರು.
ಶ್ರುತಿ ಹರಿಹರನ್ ಆರೋಪ ಚಂದನವನದಲ್ಲಿ ವಿವಾದದ ಕಿಚ್ಚು ಹಚ್ಚಿತ್ತು. ಪರ ವಿರೋಧ ಹೇಳಿಕೆಗಳೂ ವ್ಯಕ್ತವಾಗಿದ್ದವು. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷಿ ಸಿಗದ ಕಾರಣ ಅರ್ಜುನ್ ಸರ್ಜಾ ಅವರಿಗೆ ಈ ಕೇಸ್ನಿಂದ ಬಿಗ್ ರಿಲೀಫ್ ಸಿಗುವ ಸಾಧ್ಯತೆಯಿದೆ.