ಧಾರವಾಡ : ವೃಕ್ಷಮಾತೆ ಎಂದೇ ಖ್ಯಾತರಾದ ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಒಲಿದು ಬಂದಿದೆ.
ತುಳಸಿಗೌಡ ಅವರು ಕೃಷಿ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಡಾಕ್ಟರೇಟ್ ಪದವಿ ನೀಡಲು ಧಾರವಾಡ ಕೃಷಿ ವಿವಿ ನಿರ್ಧರಿಸಿದೆ. ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ ಎಂದು ವಿವಿ ಘೋಷಿಸಿದೆ.
ಜೂನ್ 16 ರಂದು ನಡೆಯಲಿರುವ ಕೃಷಿ ವಿವಿಯ 36ನೇ ಘಟಿಕೋತ್ಸವದಲ್ಲಿ ತುಳಸಿಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ರಾಜ್ಯದ ರಾಜ್ಯಪಾಲ ಹಾಗೂ ಕೃಷಿ ವಿವಿ ಕುಲಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ತುಳಸಿಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ.
ಇದನ್ನೂ ಓದಿ : ಸಾಲುಮರದ ತಿಮ್ಮಕ್ಕಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸುವಂತೆ ಸಿಎಂ ಆದೇಶ
ಜೂ.16 ರಂದು ಗೌಡಾ ಪ್ರದಾನ
ಜೂನ್ 16 ರಂದು ಬೆಳಗ್ಗೆ 11 ಘಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ಘಟಿಕೋತ್ಸವ ಸಮಾರಂಭ ನಡೆಯಲಿದೆ. ಭಾರತ ಸರ್ಕಾರದ ಕೃಷ ಸಂಶೋಧನಾ ಹಾಗೂ ಶಿಕ್ಷಣ ವಿಭಾಗದ ಮಹಾನಿರ್ದೇಶಕ ಡಾ.ಹಾಮಾಂಶು ಪಾಠಕ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕುಲಪತಿ ಡಾ.ಪಿ.ಎಲ್. ಪಾಟೀಲ್ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ನಾಡಿನ ಹಲವು ಗಣ್ಯರು ಸಂತಸ
ವೃಕ್ಷಮಾತೆ ತುಳಸಿ ಗೌಡ ಅವರು ಅಂಕೋಲಾ ತಾಲೂಕಿನ ಉಳುವರೆ ಮೂಲದ ಹೊನ್ನಳ್ಳಿಯವರು. ತುಳಸಿಗೌಡರ ಕಂಪು ಈಗ ಕೃಷಿ ವಿಶ್ವ ವಿದ್ಯಾಲಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅವರಿಗೆ ಗೌರವ ಡಾಕ್ಟರೇಟ್ ಒಲಿದು ಬಂದಿರುವುದಕ್ಕೆ ನಾಡಿನ ಹಲವು ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ.