ನವದೆಹಲಿ : ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು ಕೈಮ್ಯಾಕ್ಸ್ ತಲುಪಿದ್ದು, ಸರ್ಕಾರ ರಚನೆ ವಿರೋಧಿಸಿ ಎನ್ಸಿಪಿ – ಶಿವಸೇನೆ – ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ಮಹತ್ತರ ತೀರ್ಪು ನೀಡಿದೆ. ಬುಧವಾರ ಸಂಜೆ 5ಗಂಟೆಯೊಳಗೆ ‘ನೇರ ಪ್ರಸಾರದೊಂದಿಗೆ’ ಬಹುಮತ ಸಾಬೀತು ಪಡಿಸುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ಗೆ ‘ಸುಪ್ರೀಂ’ ಆದೇಶಿಸಿದೆ.
ಶಾಸಕರೆಲ್ಲಾ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ವಿಶ್ವಾಸ ಮತ ಪ್ರಕ್ರಿಯೆ ನಡೆಯಬೇಕು. ಗೌಪ್ಯ ಮತದಾನ ನಡೆಸದೆ ನೇರ ಪ್ರಸಾರದ ಮೂಲಕ ಮತದಾನ ಪ್ರಕ್ರಿಯೆ ನಡೆಸುವಂತೆ ಸುಪ್ರೀಂ ಸೂಚಿಸಿದ್ದು, ದೇವೇಂದ್ರ ಫಡ್ನವಿಸ್ಗೆ ಅಗ್ನಿಪರೀಕ್ಷೆ ಎದುರಾಗಿದೆ.
ಕಳೆದ 23ರಂದು ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಎನ್ಸಿಪಿಯ ಅಜಿತ್ ಪವಾರ್ ಕ್ರಮವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಈ ಮಿಂಚಿನ ಮೈತ್ರಿಗೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕ್ರಮ ಪ್ರಶ್ನಿಸಿ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು.
24 ಮತ್ತು 25ರಂದು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ನ್ಯಾ. ಎನ್ ವಿ ರಮಣ, ನ್ಯಾ. ಅಶೋಕ್ ಭೂಷಣ್ ಮತ್ತು ನ್ಯಾ. ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠ ಇಂದು ತೀರ್ಪನ್ನು ಪ್ರಕಟಿಸಿದೆ.
‘ಮಹಾ’ ತೀರ್ಪು : ನಾಳೆ ಸಂಜೆ 5ರೊಳಗೆ ಬಹುಮತ ಸಾಬೀತಿಗೆ ‘ಸುಪ್ರೀಂ’ ಆದೇಶ
TRENDING ARTICLES