Monday, November 25, 2024

Gruha Lakshmi Scheme: ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕಾಂಗ್ರೆಸ್ ನೀಡಿದ​ 5 ಗ್ಯಾರಂಟಿಗಳಲ್ಲಿವೊಂದು ಆದ  ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲ್ಲೇ ಆರಂಭವಾಗುತ್ತಿದೆ. ಈ ಯೋಜನೆಯಡಿಯಲ್ಲಿ  ಮನೆ ಯಜಮಾನಿಗೆ 2000 ರೂ ನೀಡುವುದಾಗಿ ಈಗಲೇ ಕೈ ಪಡೆ ಭರವಸೆ ನೀಡಿದ್ದು,ನೀವು ನಾಳೆಯಿಂದ ಆನ್​ಲೈನ್, ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

ಹೌದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ನಾಳೆಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: Gruha Jyothi Scheme: ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್​ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ನಾಳೆ ಶಕ್ತಿ ಭವನದಲ್ಲಿ ಸಿದ್ದರಾಮಯ್ಯನವರಿಂದ ಸೇವಾ ಸಿಂಧು ವೆಬ್ ಲಾಂಚ್ ಆಗಲಿದ್ದು, ನಾಳೆ ಮಧ್ಯಾಹ್ನ 1.30ರಿಂದ ಅರ್ಜಿ ಸಲ್ಲಿಕೆ ಮಾಡಬಬಹುದು.

RELATED ARTICLES

Related Articles

TRENDING ARTICLES