ಶಿವಮೊಗ್ಗ : ಸದನ ಆರಂಭವಾಗುವುದರ ಒಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಅದರಲ್ಲಿ ಏನೂ ವಿಶೇಷ ಇಲ್ಲ ಎಂದು ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಹೌದು, ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ, ಡಿಕೆಶಿ ವಿನಾಕಾರಣ ಗೊಂದಲ ಉಂಟು ಮಾಡುತ್ತಿದ್ದಾರೆ ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಅದರಲ್ಲಿ ಏನು ವಿಶೇಷ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಉಚಿತ ವಿದ್ಯುತ್ಗೆ ಅರ್ಜಿ ಸಲ್ಲಿಕೆ ಆರಂಭ ; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸಿದೆ
ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ ಎಂದು ಕಿಡಿಕಾರಿದರು.