ಬೆಂಗಳೂರು : ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಹೆಚ್ಚುವರಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೊದಲು ಭಾರತೀಯ ಆಹಾರ ನಿಗಮ ಅಕ್ಕಿ ನೀಡುವುದಾಗಿ ಹೇಳಿತ್ತು. ಜೂನ್ 12ರಂದು ಎಫ್ಸಿಐ ಕೂಡ ಪತ್ರ ಬರೆದು ಅಕ್ಕಿ ನೀಡಲಾಗಲ್ಲ ಎಂದು ತಿಳಿಸಿದೆ. ಬಡವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಯಾಕೆ? ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಂದು ಕಿಡಿಕಾರಿದ್ದರು.
ಇದನ್ನೂ ಓದಿ: ಒಂದು ಗ್ರಾಂ ಅಕ್ಕಿ ಕಡಿಮೆ ಕೊಟ್ಟರೂ ಜನ ಸುಮ್ಮನಿರುವುದಿಲ್ಲ; ಬಿ.ಎಸ್.ವೈ
ರಾಜ್ಯ ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಕೊಡಿಸಲಿ ಎಂದರು. ಇನ್ನೂ ಈ ಹೇಳಿಕೆಗೆ ಪ್ರತಿಕ್ರಿಯೆಸಿದ ಆರ್. ಅಶೋಕ್ ಗ್ಯಾರಂಟಿಯಾಗಿ ಹೇಳುತ್ತೇನೆ ಅಂದ್ರೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲಿ ಎಂದು ಹೇಳಿದ್ದಾರೆ.