Tuesday, November 5, 2024

ಜೂನ್​ 27ರಿಂದಲೇ ಗೃಹಲಕ್ಷ್ಮೀ ಅರ್ಜಿ ಪ್ರಕ್ರಿಯೆ ಆರಂಭ ; ಸಚಿವೆ ಲಕ್ಷ್ಮೀ ಹೆಬ್ಬಾಕ್ಕರ್ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್​ ಗ್ಯಾರಂಟಿಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್​ 27ರಿಂದಲೇ ಶುರುವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಕ್ಕರ್​ ಹೇಳಿದ್ದಾರೆ.

ಹೌದು,ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದು  ವಿಶೇಷ ಪೂಜೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ.ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ತಯಾಗುತ್ತಿದೆ.ಇದನ್ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂನ್ 27ರಿಂದ ‘ಗೃಹಲಕ್ಷ್ಮೀ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 5ನೇ ದಿನ ಕಳೆದರೂ ಗೃಹಜ್ಯೋತಿ ಅರ್ಜಿ ಸಲ್ಲಿಕೆಗೆ ಸರ್ವರ್‌ ಪ್ರಾಬ್ಲಮ್

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿ ಇಲ್ಲ

ಗೃಹಲಕ್ಷ್ಮೀ ಯೋಜನೆಗೆ ಅರ್ಜಿಸಲಿಸಲು ಯಾವುದೇ ರೀತಿಯ ಶುಲ್ಕವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಕ್ಕರ್ ತಿಳಿಸಿದ್ದಾರೆ.

ಆಗಸ್ಟ್ 16ರಿಂದಲೇ ಮನೆ ಯಜಮಾನಿ ಖಾತೆಗೆ ಹಣ

ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ಬರುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರ. ಇದರಲ್ಲಿ ಯಾವುದೇ ಗೊಂದಲಗಳು ಬೇಡ.

ಇದನ್ನೂ ಓದಿ: ಒಂದೇ ನಿಮಿಷದಲ್ಲಿ ಗೃಹಜ್ಯೋತಿ ಅರ್ಜಿ ನೋಂದಣಿ!

ನಾವು ಜಾರಿ ಮಾಡಲು ಯಾವುದೇ ತೊಂದರೆ ಇಲ್ಲ. ಮಧ್ಯವರ್ತಿಗಳ ಸಹಾಯವಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಬೇಕು ಎಂಬುವುದೇ ನಮ್ಮ ಉದ್ದೇಶ.  ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಮೈಸೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದರು.

RELATED ARTICLES

Related Articles

TRENDING ARTICLES