Friday, November 22, 2024

ಗ್ರಾಮ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕ ಸ್ಥಾಪನೆ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಹೌದು, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಭಾರತೀಯ ವಿಸ್ತರಣಾ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಅವರು ನಮ್ಮ ದೇಶದಲ್ಲಿ ಶೇ.8ರಷ್ಟು ಆಹಾರ ಧಾನ್ಯಗಳು ಪೋಲಾಗುತ್ತಿವೆ. ಶೇ.30ರಷ್ಟು ಹಣ್ಣು-ತರಕಾರಿಗಳು ಸಂಸ್ಕರಿಸದೇ ಹಾಳಾಗುತ್ತಿವೆ. ಆದರೆ ಹೊರ ದೇಶಗಳಲ್ಲಿ ಶೇ.60ರಷ್ಟುಆಹಾರ ಪದಾರ್ಥಗಳನ್ನು ಸಂಸ್ಕರಿಸುತ್ತಾರೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಗೆ 45.61 ಲಕ್ಷ ನೋಂದಣಿ

ರಾಜ್ಯ ಸರ್ಕಾರ 5 ಜಿಲ್ಲೆಯಲ್ಲಿ 5 ಕೋಟಿ ರು. ವೆಚ್ಚದಲ್ಲಿ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುತ್ತಿದೆ. ಹೆಚ್ಚಿನ ಘಟಕಕ್ಕೆ ಬೇಡಿಕೆ ಬಂದರೆ ಪೂರೈಸಲಾಗುವುದು. ಜತೆಗೆ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಘಟಕ ಸ್ಥಾಪಿಸುವ ಯೋಜನೆ ಇದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES