Monday, December 23, 2024

ಏಕಕಾಲಕ್ಕೆ 5 ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

ಬೆಂಗಳೂರು: ಏಕಕಾಲಕ್ಕೆ 5 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿಯವರು ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಚಾಲನೆ ನೀಡಿದ್ದರು

ಹೌದು, ಇಂದು ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲುಗಳಿಗೆ ವರ್ಚುವಲ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ಹೈ ಸ್ಪೀಡ್ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ 1) ರಾಣಿ ಕಮಲಾಪತಿ-ಜಬಲ್ಪುರ್​​​​​ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, 2) ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್,3) ಮಡಗಾಂವ್(ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್,4) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು,5) ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಏಕಕಾಲದಲ್ಲಿ ಚಾಲನೆ ನೀಡಿದ್ದಾರೆ.

ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು

ಈಗಾಗಲೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಇದಾಗಿದೆ. ಇನ್ನು ಧಾರವಾಡದಲ್ಲಿ ರಾಜ್ಯಪಾಲ ಗೆಹ್ಲೋಟ್​​, ಕೇಂದ್ರ ಸಚಿವ​​ ಜೋಶಿ ಹಸಿರು ನಿಶಾನೆ ತೋರಿಸಿದ್ದಾರೆ. ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡಲಿದೆ.

ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​​​​, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES